ರಾಜಕೀಯಕ್ಕೆ ಮತ್ತೆ ದೊಡ್ಮನೆ ಸೊಸೆ ಎಂಟ್ರಿ! – ನಾಳೆ ಕಾಂಗ್ರೆಸ್ ಗೆ ಗೀತಾ ಶಿವರಾಜ್ ಕುಮಾರ್ ಸೇರ್ಪಡೆ?
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದೀಗ ಕೆಲ ಸಿನಿಮಾ ನಟ, ನಟರು ಕೂಡ ಕೆಲವೊಂದು ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಇದೀಗ ದೊಡ್ಮನೆ ಸೊಸೆ, ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರಲಿದ್ದಾರೆ. ಗುರುವಾರ ರಾತ್ರಿ ಸೇರ್ಪಡೆಯ ವೇಳೆ ನಿಗದಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮೋದಿ ವಿಷ ಸರ್ಪ ಇದ್ದಂತೆ – ಹೇಳಿಕೆ ನೀಡಿದ ಕೆಲವೇ ಹೊತ್ತಲ್ಲಿ ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ
ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗೀತಾ ಶಿವರಾಜ್ ಕುಮಾರ್ ಅವರು ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಒಂದು ಬಾರಿ ಜೆಡಿಎಸ್ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗುವ ಮೂಲಕ ತಮ್ಮ ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ.