ದೇಶದ ಹಲವೆಡೆ ಭಾರಿ ಮಳೆ – ಸಿಡಿಲು ಬಡಿದು 14 ಮಂದಿ ಸಾವು

ದೇಶದ ಹಲವೆಡೆ ಭಾರಿ ಮಳೆ – ಸಿಡಿಲು ಬಡಿದು 14 ಮಂದಿ ಸಾವು

ದೇಶದ ಹಲವು ಭಾಗಗಳಲ್ಲಿ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಗುರುವಾರ ಗುಡುಗು ಸಹಿತ ಮಳೆ ಸುರಿದಿದ್ದು, ಸಿಡಿಲು ಬಡಿದು 14 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದಾರೆ. ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು, ಮುರ್ಷಿದಾಬಾದ್ ಹಾಗೂ ಉತ್ತರ 24 ಪರಗಣದಲ್ಲಿ ತಲಾ ಇಬ್ಬರು, ಪಶ್ಚಿಮ ಮಿಡ್ನಾಪುರ ಹಾಗೂ ಹೌರಾದಲ್ಲಿ ತಲಾ ಮೂರು ಜನ ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಹೆಚ್ಚಿನ ಜನ ರೈತರಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದರು ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾಯ್ತು ಬಿಸಿಲ ಝಳ – ಹೊರಾಂಗಣ ಕಾರ್ಯಕ್ರಮಗಳಿಗೆ ಬ್ರೇಕ್!

ಇನ್ನು ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಗುರುವಾರ ಮಳೆಯಾಗಿದೆ. ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹಲವೆಡೆ ರಸ್ತೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಕಲಬುರಗಿ ಮತ್ತು ಬೀದರ್ ಜಿಲ್ಲೆಯ ವಿವಿಧೆಡೆ ಗುರುವಾರ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ರಸ್ತೆಗಳಲ್ಲಿ, ಕಟ್ಟಡಗಳ ಸುತ್ತಮುತ್ತ ರಾಶಿಗಟ್ಟಲೇ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರ ಅಡ್ಡಿಯುಂಟಾಗಿತ್ತು. ಅಷ್ಟೇ ಅಲ್ಲದೇ ಸುಮಾರು 11 ಜಾನುವಾರುಗಳು ಸಾವನ್ನಪ್ಪಿವೆ.

suddiyaana