‘ಕೈ’ಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ದೊಡ್ಮನೆ ಸೊಸೆ – ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್  

‘ಕೈ’ಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ದೊಡ್ಮನೆ ಸೊಸೆ – ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್  

ಬೆಂಗಳೂರು: ದೊಡ್ಮನೆ ಸೊಸೆ, ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದ್ದಾರೆ. ಮಧು ಬಂಗಾರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ: ಮೇ 10 ರಂದು ಪ್ರವಾಸಿ ತಾಣಗಳು ಬಂದ್! – ಕಾರಣವೇನು ಗೊತ್ತಾ?

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದ್ದು, ಸುಮಾರು ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ. ಕೊನೆಗೆ ನಮ್ಮ ಗಾಳಕ್ಕೆ ಮಧು ಬಂಗಾರಪ್ಪ ಬಿದ್ದರು. ಇದೀಗ ಗೀತಾ ಶಿವರಾಜ್ ಕುಮಾರ್ ದೊಡ್ಡ ಬಲೆ ಬಿದ್ದಿದ್ದಾರೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದ ಬಲೆಗೆ ಗೀತಾ ಶಿವರಾಜ್ ಕುಮಾರ್ ಬಿದ್ದಿದ್ದಾರೆ. ಆದ್ರೆ ಗೀತಾ ಶಿವರಾಜ್ ಕುಮಾರ್ ಅವರು ಪಕ್ಷಕ್ಕೆ ಸೇರಲು ಒಳ್ಳೆ ಘಳಿಗೆ ಒಳ್ಳೆ ಮುಹೂರ್ತ ನೋಡಿದ್ದೇನೆ. ಈಗ ಬಂದು ಸೇರಿದ್ದಾರೆ. ನನ್ನ ನಾಯಕ ಬಂಗಾರಪ್ಪ ಪುತ್ರಿ ಇವರು, ರಾಜ್ ಕುಮಾರ್ ಸೊಸೆ. ಇಡೀ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ ಕುಮಾರ್​ಗೆ ಸ್ವಾಗತ ಎಂದರು.

‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಅಂತಾ ಶಿವರಾಜ್ ಕುಮಾರ್ ಹೇಳಿದ್ದಾರೆ.

suddiyaana