ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಕೆ.ಎಲ್ ರಾಹುಲ್ – ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ಗೂ ಡೌಟ್..!
ಗಾಯದಿಂದ ಬಳಲುತ್ತಿರುವ ಲಖನೌ ಸೂಪರ್ ಜೇಂಟ್ಸ್ ತಂಡ ನಾಯಕ ಕೆ.ಎಲ್ ರಾಹುಲ್ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಹೊರಬಿದ್ದಿದ್ದಾರೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಭೀರವಾದ ತೊಡೆಯ ಗಾಯಕ್ಕೆ ಒಳಗಾಗಿರುವ ಕೆ.ಎಲ್ ರಾಹುಲ್ ಅನುಪಸ್ಥಿತಿ ತಂಡಕ್ಕೆ ದೊಡ್ಡ ಶಾಕ್ ನೀಡಿದೆ. ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲೂ ಆಡುವುದು ಅನುಮಾನ ಎನ್ನಲಾಗ್ತಿದೆ.
ಇದನ್ನೂ ಓದಿ: ನಿವೃತ್ತಿ ಬಗ್ಗೆ ಗುಟ್ಟು ಬಿಟ್ಟುಕೊಡದ ಧೋನಿ – ಮಾತಿನಲ್ಲಿ ಅಚ್ಚರಿ ಮೂಡಿಸಿದ ಮಹಿ..!
ಮೇ 1ರಂದು ಲಖನೌ ಏಕಾನಾ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕೆ. ಎಲ್ ರಾಹುಲ್ ಗಂಭೀರವಾದ ತೊಡೆಯ ಗಾಯಕ್ಕೆ ಒಳಗಾಗಿದ್ದರು. ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗಾಯಗೊಂಡಿದ್ದರು. ಹೀಗಾಗಿ 2ನೇ ಓವರ್ ಬಳಿಕ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಅಲ್ಲದೆ 11ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದರೂ ಕೂಡಾ ಓಡುವ ಸ್ಥಿತಿಯಲ್ಲಿರಲಿಲ್ಲ. ಲಖನೌ ಫ್ರಾಂಚೈಸಿಯನ್ನು ಕೆಎಲ್ ರಾಹುಲ್ ತೊರೆದಿದ್ದು, ಮುಂಬೈಗೆ ತೆರಳಲಿದ್ದಾರೆ. ಅಲ್ಲಿ ತೊಡೆಯ ಗಾಯದ ಸ್ಕ್ಯಾನಿಂಗ್‌ಗೆ ಒಳಗಾಗಿದ್ದಾರೆ. ಆದರೆ, ಸ್ಕ್ಯಾನಿಂಗ್ ರಿಪೋರ್ಟ್ ಬಗ್ಗೆ ಯಾರೂ ಮಾಹಿತಿ ಹೊರಹಾಕಿಲ್ಲ. ರಾಹುಲ್ ಅವರು ಮಂಡಿರಜ್ಜು ಅಥವಾ ಸೊಂಟದ ಗಾಯದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ಅವರ ಚಿಕಿತ್ಸೆಯ ಮೇಲ್ವಿಚಾರಣೆ ಮಾಡುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಗುರುವಾರ ರಾತ್ರಿಯವರೆಗೆ ತಂಡದ ನಿರ್ವಹಣೆ ಸೇರಿದಂತೆ ಸಂಬಂಧಿಸಿದ ಯಾರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ರಾಹುಲ್ ಅವರ ಗಾಯದ ಪ್ರಮಾಣ ಎಷ್ಟಿದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.