ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ? – ಶಿಕ್ಷಣ ಇಲಾಖೆ ಹೇಳಿದ್ದೇನು?
ಬೆಂಗಳೂರು: 2023 ರ ಕರ್ನಾಟಕ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 30 ರಿಂದ ಏಪ್ರಿಲ್ 15 ರ ವರೆಗೆ ನಡೆದಿದ್ದು, ಮೌಲ್ಯಮಾಪನ ಕೂಡ ಪೂರ್ಣಗೊಂಡಿದೆ. ಇದೀಗ ಮೌಲ್ಯ ಮಾಪನದ ನಂತರದ ಕಾರ್ಯವನ್ನು ಪ್ರಗತಿಯಲ್ಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಚುನಾವಣಾ ಆಯೋಗದಿಂದ ವಿಶೇಷ ಸೌಲಭ್ಯ – ಮನೆ ಬಾಗಿಲಿಗೆ ಬರಲಿದೆ ಕ್ಯಾಬ್..!
2023 ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಏಪ್ರಿಲ್ 24 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು ಆರಂಭ ಮಾಡಿದ್ದು ಮುಕ್ತಾಯದ ಹಂತದಲ್ಲಿದೆ.
ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದರಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತ ಮಂಡಳಿ ಕಾಯಬೇಕಾಗಿದೆ. ಹೀಗಾಗಿ ಫಲಿತಾಂಶ ಸಿದ್ಧವಾಗಿದ್ದರೂ ಮತದಾನ ಪೂರ್ಣಗೊಳ್ಳುವವರೆಗೆ ಕಾಯಬೇಕಿದೆ. ಈ ನಡುವೆ ಚುನಾವಣೆ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.