ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ – ವಿದ್ಯಾರ್ಥಿನಿಯರೇ ಈ ಬಾರಿಯೂ ಬೆಸ್ಟ್ , ಚಿತ್ರದುರ್ಗ ಫಸ್ಟ್ – ಯಾದಗಿರಿ ಲಾಸ್ಟ್

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ – ವಿದ್ಯಾರ್ಥಿನಿಯರೇ ಈ ಬಾರಿಯೂ ಬೆಸ್ಟ್ , ಚಿತ್ರದುರ್ಗ ಫಸ್ಟ್ – ಯಾದಗಿರಿ ಲಾಸ್ಟ್

2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ 83.89 % ಫಲಿತಾಂಶ ಬಂದಿದೆ. ಒಟ್ಟು ನಾಲ್ಕು ವಿದ್ಯಾರ್ಥಿಗಳು ಒಟ್ಟು 625 ಅಂಕಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೇ ಸ್ಥಾನದಲ್ಲಿದೆ. ಮಂಡ್ಯ ಜಿಲ್ಲೆ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಸನ ಜಿಲ್ಲೆ ತೃತೀಯ ಸ್ಥಾನದಲ್ಲಿದೆ.

ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ , ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ.

2022- 2023ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದು,  ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು  63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ನೋಡಬಹುದು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್ಎಸ್ಎಲ್ಸಿ ಫಲಿತಾಂಶವನ್ನು ಡೌನ್ಲೋಡ್ ಮಾಡಲು ಎಸ್ಎಸ್ಎಲ್ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಾಗುತ್ತದೆ. ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್ಸೈಟ್ ತೆರೆಯಬೇಕು. ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು.

suddiyaana