‘ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್’ಗೆ ನೋಟಿಸ್ – ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಕಿಡಿ

‘ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್’ಗೆ ನೋಟಿಸ್ – ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದೆ.  ರಾಜಕೀಯ ಪಕ್ಷಗಳು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿಪಕ್ಷಗಳ ವಿರುದ್ಧ ಆರೋಪ, ಪ್ರತ್ಯಾರೋಪ ಮಾಡುತ್ತಲೇ ಬಂದಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಗ್ರೆಸ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ  ‘ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್’ ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ಕಾಂಗ್ರೆಸ್ ಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: ‘ನಾನು ಸಿಎಂ ಆಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ – ಕದನಕಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ಅಬ್ಬರ

ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತನ್ನು ಕಾಂಗ್ರೆಸ್ ಪತ್ರಿಕೆಗಳಲ್ಲಿ  ಪ್ರಕಟಿಸಿತ್ತು. ಈ ಸಂಬಂಧ ಚುನಾವಣಾ ಆಯೋಗ ಕಳೆದ ಶನಿವಾರ ಕಾಂಗ್ರೆಸ್ ಗೆ ನೊಟೀಸ್ ಜಾರಿ ಮಾಡಿ ತನ್ನ ಆರೋಪಕ್ಕೆ ಪ್ರಾಯೋಗಿಕ ಸ್ಪಷ್ಟ ಪುರಾವೆಯನ್ನು ಭಾನುವಾರದೊಳಗೆ ಒದಗಿಸಬೇಕೆಂದು ಸೂಚಿಸಿತ್ತು. ಇದೀಗ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಕೆಂಡಾಮಂಡಲವಾಗಿದೆ. ಕೈ ಪಕ್ಷಪಾತವಾಗಿ ನಡೆದುಕೊಳ್ಳುತ್ತಿದೆ. ಚುನಾವಣಾ ಆಯೋಗ ಮಾನದಂಡಗಳು ಕೇವಲ ವಿರೋಧ ಪಕ್ಷಕ್ಕೆ ಮಾತ್ರ ಅನ್ವಯವಾಗುತ್ತದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಚುನಾವಣಾ ಮಾರ್ಗಸೂಚಿಗಳನ್ನು ಹಲವು ಬಾರಿ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗದ ಗಮನಕ್ಕೆ ಹಲವು ಬಾರಿ ತಂದಿದ್ದರೂ, ಚುನಾವಣಾ ಆಯೋಗ ಒಂದು ನೊಟೀಸ್ ಜಾರಿ ಮಾಡುವುದಾಗಲಿ, ಖಂಡಿಸುವುದಾಗಲಿ ಮಾಡಿಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ, ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಆಯೋಗ ಉತ್ತರ ನೀಡಲು ಒದಗಿಸಿರುವ 24 ಗಂಟೆಗಳ ಗಡುವು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರವು ಇಂದಿಗೆ ಮುಕ್ತಾಯಗೊಳ್ಳುತ್ತಿರುವುದರಿಂದ ಪ್ರತಿಕ್ರಿಯಿಸಲು ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ನೀಡಿದ್ದ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ ಮಾಡಿತ್ತು. 2019 ಮತ್ತು 2023 ರ ನಡುವೆ ರಾಜ್ಯದಲ್ಲಿ “ಭ್ರಷ್ಟಾಚಾರ ದರಗಳು” ಪಟ್ಟಿ ಮಾಡುವ ಪೋಸ್ಟರ್ ಮತ್ತು ಜಾಹೀರಾತುಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರವನ್ನು “ಟ್ರಬಲ್ ಇಂಜಿನ್” ಎಂದು ಬಣ್ಣಿಸಿದೆ.

suddiyaana