ದ್ವಿತೀಯ PUC ಪೂರಕ ಪರೀಕ್ಷೆ ದಿನಾಂಕ ಬದಲು – ಪರಿಷ್ಕೃತ ವೇಳಾಪಟ್ಟಿ ಹೀಗಿದೆ..

ಬೆಂಗಳೂರು: 2022 – 23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22 ರಿಂದ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ತಿದ್ದುಪಡಿ ಮಾಡಿದೆ.
ಮೇ 22 ರಿಂದ ಜೂ. 2ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ಮೇ 22ರ ಬದಲಿಗೆ ಮೇ 23ರಿಂದ ಜೂ.3ರವರೆಗೆ ನಡೆಸಲು ತೀರ್ಮಾನಿಸಿದೆ.
ಇದನ್ನೂ ಓದಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ – ಫೇಲ್ ಆದವರಿಗೆ ಮತ್ತೊಂದು ಚಾನ್ಸ್!
ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮೇ 23 ರಿಂದ ಪೂರಕ ಪರೀಕ್ಷೆ ಆರಂಭವಾಗಲಿದ್ದು, ಹದಿನೈದು ದಿನಗಳ ಮುಂಚೆಯೇ ಪರೀಕ್ಷಾರ್ಥಿಗಳಿಗೆ ದಿನಾಂಕವನ್ನು ಘೋಷಣೆ ಮಾಡಿದೆ. ಇನ್ನು ಪರೀಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯ ಕುರಿತ ಹೆಚ್ಚಿನ ಮಾಹಿತಿಗಾಗಿ, ಪರೀಕ್ಷಾರ್ಥಿಗಳು https://kseab.karnataka.gov.in/ ವೆಬ್ಸೈಟ್ಗೆ ಭೇಟಿ ನೀಡಿ ವೇಳಾಪಟ್ಟಿ ಮಾಹಿತಿ ಪಡೆಯಬಹುದು. ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಮಧ್ಯಾಹ್ನ 2.15ರಿಂದ 5.30ರ ವರೆಗೆ ನಡೆಯಲಿದೆ.
ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..
- ಮೇ 23- ಕನ್ನಡ, ಅರೇಬಿಕ್
- ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
- ಮೇ 25 – ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್)
- ಮೇ 26- ಸಮಾಜಶಾಸ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
- ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
- ಮೇ 28- ರಜೆ
- ಮೇ 29- ಹಿಂದಿ (ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
- ಮೇ 30- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತ ಶಾಸ್ತ್ರ
- ಮೇ 31- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಲೆಕ್ಕಶಾಸ್ತ್ರ
- ಜೂ.1- ರಾಜ್ಯಶಾಸ, ಗಣಿತ ಶಾಸ್ತ್ರ
- ಜೂ.2 – ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
- ಜೂ.3 – ಅರ್ಥಶಾಸ್ತ್ರ, ಜೀವಶಾಸ್ತ್ರ

ನೋಡಿರಿ

