ಕರ್ನಾಟಕದ ಮಹಾತೀರ್ಪಿಗೆ ಕ್ಷಣಗಣನೆ-ಯಾರಿಗೆ ಸಿಗಲಿದೆ ಅಧಿಕಾರದ ಚುಕ್ಕಾಣಿ
ಮೇ10 ರಂದು ಒಂದೇ ಹಂತದಲ್ಲಿ ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕದ ರಾಜಕೀಯ ದಿಕ್ಕನ್ನು ಬದಲಿಸುವ ಮಹಾತೀರ್ಪಿಗೆ ಜನ ಕಾಯುತ್ತಿದ್ದಾರೆ. ಮೇ10 ರಂದು ಒಂದೇ ಹಂತದಲ್ಲಿ ಕರ್ನಾಟಕದ 224 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಇನ್ನು ಕೆಲವೇ ಹೊತ್ತಲ್ಲಿ ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ಬಯಲಾಗಲಿದೆ. ಬಹು ನಿರೀಕ್ಷಿತ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾಗಲಿದೆ. ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ.. ಮತದಾನೋತ್ತರ ಸಮೀಕ್ಷೆಗಳ ಭವಿಷ್ಯ ನಿಜವಾಗುತ್ತಾ.. ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುತ್ತಾ.. ರಾಜ್ಯದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತಾ. ಜೆಡಿಎಸ್ ಕಿಂಗ್ ಮೇಕರ್ ಆಗುತ್ತಾ ಹೀಗೆ ನಾನಾ ಲೆಕ್ಕಾಚಾರಗಳು ಗರಿಗೆದರಿವೆ. 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು 20ಕ್ಕೂ ಅಧಿಕ ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ಒಳಗೆ ಫಲಿತಾಂಶದ ಚಿತ್ರಣ ಹೊರಬೀಳುತ್ತೆ.