ಕರಾವಳಿಯಲ್ಲಿ ‘ಕಮಲ’ ಕಮಾಲ್ – 8 ಕ್ಷೇತ್ರದಲ್ಲಿ ಬಿಜೆಪಿಗೆ ಜೈ, 2 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ‘ಕೈ’

ಕರಾವಳಿಯಲ್ಲಿ ‘ಕಮಲ’ ಕಮಾಲ್ – 8 ಕ್ಷೇತ್ರದಲ್ಲಿ ಬಿಜೆಪಿಗೆ ಜೈ, 2 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ‘ಕೈ’

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದರೆ, ಉಳಿದ ಎರಡು ಕ್ಷೇತ್ರಗಲ್ಲಿ ಕಾಂಗ್ರೆಸ್ ಗೆದ್ದಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ್ತು  ಮಂಗಳೂರು ಕ್ಷೇತ್ರದಲ್ಲಿ ಯುಟಿ ಖಾದರ್ ಗೆಲುವಿನ ಬಗೆ ಬೀರಿದ್ದಾರೆ. 2018ಕ್ಕೆ ಹೋಲಿಸಿದರೆ ಜಿಲ್ಲೆ ಒಂದು ಕ್ಷೇತ್ರವನ್ನು ಕಳೆದುಕೊಂಡಿದೆ.  ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ 7 ಕ್ಷೇತ್ರಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಪುತ್ತೂರು ಕ್ಷೇತ್ರ ಬಿಜೆಪಿಯ ಕೈ ತಪ್ಪಿದೆ.

ಇದನ್ನೂ ಓದಿ:  ಹಾಲಿ ಮಂತ್ರಿಗಳಿಗೆ ಶಾಕ್ ಕೊಟ್ಟ ಮತದಾರರು – ಚುನಾವಣೆಯಲ್ಲಿ ಸೋತ ಸಚಿವರೆಷ್ಟು ಗೊತ್ತಾ?

ಬಿಜೆಪಿಯ ಡಿ. ವೇದವ್ಯಾಸ ಕಾಮತ್ ಮತ್ತೊಮ್ಮೆ ಗೆದ್ದು ಬಂದಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಜೆ.ಆರ್. ಲೋಬೊ, ಅವರನ್ನು ಮತ್ತೊಮ್ಮೆ ಪರಾಭವಗೊಳಿಸಿದ್ದಾರೆ. ಇದು ವೇದವ್ಯಾಸ್  ಕಾಮತ್ ಅವರ ಎರಡನೇ ಗೆಲುವು. ಈ ಕ್ಷೇತ್ರದಲ್ಲಿ ಬಿಜೆಪಿಯ ಭರತ್ ಶೆಟ್ಟಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದಾರೆ. ಸುಮಾರು 40 ಸಾವಿರಕ್ಕೂ ಅಧಿಕ ಮತಗಳಿಂದ ಇಲ್ಲಿ ಭರತ್ ಶೆಟ್ಟಿ ಜಯ ಗಳಿಸಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು. ಟಿ ಖಾದರ್ ಭಾರೀ ಅಂತರದಿಂದ  ಗೆದ್ದಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರ ಕಾಂಗ್ರೆಸ್ ನ ಭದ್ರ ನೆಲೆ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಶ್ ನಾಯ್ಕ್ ಕಾಂಗ್ರೆಸ್ ನ ಹಿರಿ ತಲೆ ರಮಾನಾಥ ರೈ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.  ಪುತ್ತೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಕಾಂಗ್ರೆಸ್ ನ ಅಶೋಕ ರೈ ಗೆಲುವಿನ ನಗೆ ಬೀರಿದ್ದಾರೆ. ಇವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಸೋಲಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಸುಳ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಶಾಸಕಿಯ ಆಯ್ಕೆಯಾಗಿ ಬಂದಿದ್ದಾರೆ. ಬಿಜೆಪಿಯ ಭಾಗೀರಥಿ ಮುರುಳ್ಯ, ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಉಮಾನಾಥ್ ಕೋಟ್ಯಾನ್,  ಕಾಂಗ್ರೆಸ್ ನ ಮಿಥುನ್ ರೈ ಅವರನ್ನು ಸೋಲಿಸಿದ್ದಾರೆ. ಉಮಾನಾಥ ಕೋಟ್ಯಾನ್ ಈ ಗೆಲುವಿನೊಂದಿಗೆ ಎರಡನೇ ಬಾರಿ ಶಾಸಕರಾಗಿ ಗೆದ್ದು ಬಂದಿದ್ದಾರೆ. ಬಿಜೆಪಿಯ ಹರೀಶ್ ಪೂಂಜಾ ವಿಜಯ ಪತಾಕೆ ಹಾರಿಸಿದ್ದಾರೆ.  ಇವರು ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಅವರನ್ನು ಸೋಲಿಸಿದ್ದಾರೆ.

suddiyaana