ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್‌ – ಇನ್ನು ಮುಂದೆ ಆಫೀಸ್‌ನಲ್ಲೂ ಮದ್ಯಪಾನ ಮಾಡಬಹುದು!

ಮದ್ಯ ಪ್ರಿಯರಿಗೆ ಗುಡ್‌ ನ್ಯೂಸ್‌ – ಇನ್ನು ಮುಂದೆ ಆಫೀಸ್‌ನಲ್ಲೂ ಮದ್ಯಪಾನ ಮಾಡಬಹುದು!

ಚಂಡೀಗಢ: ಕಚೇರಿ, ಶಾಲೆ – ಕಾಲೇಜು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಬಾರದು. ಇಂತಹ ಪ್ರದೇಶಗಳಲ್ಲಿ ಧೂಮಪಾನ, ಮಧ್ಯಪಾನ ಮಾಡಿದ್ರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ನಿಯಮ ಜಾರಿಗೊಳಿಸುತ್ತದೆ. ಆದರೆ ಈ ರಾಜ್ಯದಲ್ಲಿ ಮಾತ್ರ ಕಚೇರಿಯಲ್ಲಿ ಮದ್ಯಪಾನ ಮಾಡಬಹುದು ಎಂದು ಸರ್ಕಾರವೇ ನಿಯಮ ಜಾರಿಗೆ ತಂದಿದೆ.

ಇದನ್ನೂ ಓದಿ: ಮೊಬೈಲ್ ಕಳೆದು ಹೋದರೂ ಮತ್ತೆ ಸಿಗುತ್ತೆ! – ಸರ್ಕಾರದ ಹೊಸ ಪ್ಲಾನ್‌ ಏನು?

ಈ ಹೊಸ ರೂಲ್ಸ್‌ ಜಾರಿಗೆ ತಂದಿರುವುದು ಹರ್ಯಾಣದ ಸರ್ಕಾರ. ರಾಜ್ಯದಲ್ಲಿ ಕಾರ್ಪೊರೇಟ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವರು  ಸಹೋದ್ಯೋಗಿಗಳೊಂದಿಗೆ ಮದ್ಯಪಾನ ಮಾಡಬಹುದು ಎಂದು ನಿಯಮ ಜಾರಿಗೆ ತಂದಿದೆ. ಹರಿಯಾಣ ಮದ್ಯ ನೀತಿಯ ಪ್ರಕಾರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದಂತೆ ಜೂನ್ 12 ರಿಂದ ರಾಜ್ಯಾದ್ಯಂತ ದೊಡ್ಡ ಕಾರ್ಪೊರೇಟ್ ಕಚೇರಿಗಳಲ್ಲಿ ಕಡಿಮೆ ಕಂಟೆಂಟ್ ಆಲ್ಕೋಹಾಲ್ ಪಾನೀಯಗಳಾದ ಬಿಯರ್, ವೈನ್ ಮತ್ತು ರೆಡಿ ಟು ಡ್ರಿಂಕ್ ಪಾನೀಯಗಳನ್ನು ಸೇವಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದು ಘೋಷಿಸಿದೆ.

ಹರಿಯಾಣ ಮದ್ಯ ನೀತಿಯ ಈ ಹೊಸ ನಿಯಮವನ್ನು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಿಷ್ಠ 5,000 ಉದ್ಯೋಗಿಗಳನ್ನು ಹೊಂದಿರುವ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಗಳು ಬಿಯರ್ ಹಾಗೂ ವೈನ್‌ನಂತಹ ಪಾನೀಯಗಳನ್ನು ಸೇವಿಸಬಹುದು.

ಒಂದು ಲಕ್ಷ ಚದರ ಅಡಿ ವ್ಯಾಪ್ತಿಯ ಪ್ರದೇಶದಲ್ಲಿ ಹಾಗೂ ಒಂದೇ ಆವರಣದೊಳಗೆ ಮದ್ಯಪಾನಕ್ಕೆ ಅನುಮತಿ ನೀಡಲಾಗುತ್ತಿದೆ. ಇದರರ್ಥ ನೀವು ದೊಡ್ಡ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರೆ ಕಚೇರಿಯ ಆವರಣದಲ್ಲಿ ಬಿಯರ್ ಅಥವಾ ವೈನ್ ಕುಡಿಯಬಹುದು. ಇವುಗಳನ್ನು ಕಚೇರಿಯಲ್ಲಿಯೇ ನೀಡಬೇಕು ಎಂದೇನಿಲ್ಲ. ನೀವು ಸ್ವಂತವಾಗಿಯೂ ಖರೀದಿಸಿ ಕಚೇರಿಯಲ್ಲಿ ಸೇವನೆ ಮಾಡಬಹುದು ಎಂದು ಸರ್ಕಾರ ಹೇಳಿದೆ.

suddiyaana