ಕೊನೆಗೂ ಹೈಡ್ರಾಮಕ್ಕೆ ತೆರೆ – ಗದ್ದುಗೆ ಗುದ್ದಾಟದಲ್ಲಿ ಗೆದ್ದ ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್ ಡಿಸಿಎ - ಮೇ. 20ಕ್ಕೆ ಪಟ್ಟಾಭಿಷೇಕ

ಕೊನೆಗೂ ಹೈಡ್ರಾಮಕ್ಕೆ ತೆರೆ – ಗದ್ದುಗೆ ಗುದ್ದಾಟದಲ್ಲಿ ಗೆದ್ದ ಸಿದ್ದರಾಮಯ್ಯಡಿ.ಕೆ ಶಿವಕುಮಾರ್ ಡಿಸಿಎ - ಮೇ. 20ಕ್ಕೆ ಪಟ್ಟಾಭಿಷೇಕ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಐದು ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿ ಕದನ ಕೊನೆಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು  ಒಪ್ಪಿಗೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಟ್ವೀಟ್ ಗೆ ಎಂಟಿಬಿ ಗರಂ – ಇಷ್ಟು ದಿನ ಯಾಕೆ ಮೌನವಾಗಿದ್ರೆಂದು ಟಾಂಗ್!

ನೂತನ ಸಿಎಂ ಸಿದ್ದರಾಮಯ್ಯ ಎಂದು ಹೈಕಮಾಂಡ್ ನಿರ್ಧರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಅಲಂಕರಿಸಲಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿಯೇ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗಿದೆ.

ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು ಈಗಾಗಲೇ ರಾರಾಜಿಸುತ್ತಿವೆ. 2ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯಗೆ ಶುಭಾಶಯಗಳು ಎಂದು ಫ್ಲೆಕ್ಸ್‌ಗಳಲ್ಲಿ ಬರೆಯಲಾಗಿದೆ. ಶನಿವಾರ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು ಸೇರಿ ಸುಮಾರು 1 ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ನೂತನ ಮುಖ್ಯಮಂತ್ರಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.

suddiyaana