ರಾಜ್ಯದಲ್ಲಿ ಸಚಿವ ಸ್ಥಾನಕ್ಕೆ ಭಾರಿ ಕಸರತ್ತು – ಸಿದ್ದು, ಡಿಕೆಶಿಗೂ ಮೊದಲೇ ದೆಹಲಿಗೆ ತೆರಳಿದ ಶಾಸಕರು!
ಬೆಂಗಳೂರು: ರಾಜ್ಯದಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಈಗ ಸಚಿವ ಸಂಪುಟ ರಚನೆಗೆ ಕಸರತ್ತು ಶುರುವಾಗಿದೆ. ಈ ಹಿನ್ನೆಲೆ ಭಾವಿ ಸಿಎಂ ಸಿದ್ದರಾಮಯ್ಯ ಮತ್ತು ಭಾವಿ ಡಿಸಿಎಂ ಡಿ.ಕೆ. ಶಿವಕುಮಾರ್ ಶುಕ್ರವಾರ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಡಿಕೆಶಿ ಹಾಗೂ ಸಿದ್ಧರಾಮಯ್ಯ ಹಾಗೂ ದೆಹಲಿಗೆ ತೆರಳುವ ಮುನ್ನವೇ ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದು, ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಲಾಭಿಗೆ ಮುಂದಾಗಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಲ್ಲೀಗ ಸಂಪುಟ ರಚನೆ ಸರ್ಕಸ್ – ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು
ಶುಕ್ರವಾರ ಬೆಳ್ಳಂಬೆಳಗ್ಗೆ ಮೂರು ತಂಡಗಳಾಗಿ ಶಾಸಕರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂರು ವಿಮಾನಗಳಲ್ಲಿ 22 ಜನ ಶಾಸಕರು ಪ್ರಯಾಣ ಬೆಳೆಸಿದ್ದಾರೆ. ಹಿರಿಯ ಶಾಸಕರ ಜೊತೆಗೆ ನೂತನ ಶಾಸಕರು ಕೂಡ ಪ್ರಯಾಣ ಮಾಡಿದ್ದಾರೆ.
ಇನ್ನು ಎರಡನೇ ಗುಂಪಿನಲ್ಲಿ ಶಾಸಕರಾದ ಕೃಷ್ಣಬೈರೆಗೌಡ, ಎನ್ಎ ಹ್ಯಾರೀಸ್, ಶ್ರೀನಿವಾಸ್ ಮಾನೆ, ರಿಜ್ವಾನ್ ಹರ್ಷದ್, ಈಶ್ವರ್ ಖಂಡ್ರೆ, ರಹಿಂ ಖಾನ್ ಬೆಳಗ್ಗೆ 06.15ರ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣ ಬೆಳೆಸಿದ್ದಾರೆ. ಇನ್ನು ಮೂರನೆ ಗುಂಪಿನಲ್ಲಿ ಕೆ. ಎಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಸಿ.ಎಸ್. ನಾಡಗೌಡ, ಅಶೋಕ್ ರೈ, ಕೆ.ಎನ್. ರಾಜಣ್ಣ, ಕೆ.ಆರ್. ರಾಜೇಂದ್ರ, ಎಂಎಲ್ಸಿ ಅರವಿಂದ ಅರಳಿ ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7.20ರ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.;