ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣಾ – ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣಾ – ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕರ್ನಾಟಕದಲ್ಲಿ ಇನ್ನೂ 5 ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ‌ ಇಲಾಖೆ ನಿರ್ದೇಶಕ ಪ್ರಸಾದ್, ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇನ್ನೂ  5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಮೋಡಕವಿದ ವಾತಾವರಣವಿದ್ದು, ಬುಧವಾರ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದ್ದಾರೆ.

ಇದನ್ನೂ ಓದಿ: 2 ವರ್ಷಗಳ ಬಳಿಕ ಡಿಕೆಶಿಗೆ ರಾಜಯೋಗ – 8 ವರ್ಷ ಸಿಎಂ ಆಗಿರುತ್ತಾರೆಂದು ಜ್ಯೋತಿಷಿ ಭವಿಷ್ಯ!

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ  ಮಳೆಯಾದರೆ, ಐದನೇ ದಿನ ಕೆಲವು ಕಡೆ ಮಳೆಯಾಗಲಿದೆ. ಇನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಗುಡುಗು ಸಮೇತ ಭಾರಿ ಮಳೆ ಮುನ್ಸೂಚನೆಯಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ನೆಲಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇನ್ನು ಉತ್ತರ ಒಳನಾಡಿನ ಕೆಲ ಭಾಗಕ್ಕೆ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಭಾರೀ ಮಳೆ ಹಿನ್ನಲೆ ಮರಗಳ ಕೊಂಬೆಗಳು ಬೀಳುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಂಡ್ಯ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು, ಜಿಲ್ಲೆಗೆ ಯಲ್ಲೊ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ- ನೆಲಗಾಳಿ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹೇಳಿದೆ.

suddiyaana