ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತೆ! – ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ, ಬೊಮ್ಮಾಯಿ

ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತೆ! – ಹೊಸ ಬಾಂಬ್‌ ಸಿಡಿಸಿದ ಹೆಚ್‌ಡಿಕೆ, ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್‌ ಬಹುಮತದಿಂದ ಗೆದ್ದಿದ್ದು, ಸಂಪುಟ ರಚನೆಗೆ ಸರ್ಕಸ್‌ ನಡೆಸುತ್ತಿದೆ. ಈ ಬೆನ್ನಲ್ಲೇ ಮಾಜಿ ಸಿಎಂಗಳಾಗ ಬಸವರಾಜ ಬೊಮ್ಮಾಯಿ ಹಾಗೂ ಹೆಚ್‌.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ದ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದು ಹೆಚ್‌ಡಿಕೆ ಹೇಳಿದ್ರೆ, ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಹೇಳಿಕೆಗಳು ರಾಜ್ಯ ರಾಜಕಾರಣ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ʼಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲʼ – ನೂತನ ಶಾಸಕರಿಗೆ ದೇವೇಗೌಡರಿಂದ ಸೋಲು ಗೆಲುವಿನ ಪಾಠ

ಕಾಂಗ್ರೆಸ್‌ ಅಧಿಕಾರವಧಿಯ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಲ್ಲಿ ಮಾತನಾಡಿದ್ದು, ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗಲಿದೆ. ಈ ಸರ್ಕಾರ ಹೋಗುವಂತ ದಾರಿ ನೋಡಿದ್ರೆ ಬಹಳ ದಿನ‌ ನಡೆಯಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ದ್ವೇಶದ ರಾಜಕಾರಣ ಮಾಡುತ್ತಿದೆ. ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್​​ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೆವೆ. ನಾವು ತಂದ ಜನಪರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ. ಎಲ್ಲೋ ಅಲ್ಪ ಸ್ವಲ್ಪ ವ್ಯತ್ಯಾಸ ಆಗಿದಕ್ಕೆ ನಾವು ಸೋತಿರಬಹುದು. ಆದ್ರೆ ಸ್ವಾಭಿಮಾನ ಕಳೆದುಕೊಂಡಿಲ್ಲ. ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಡುತ್ತೇವೆ. ಮತ್ತೆ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೆವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಕಾಂಗ್ರೆಸ್‌ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ. ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. ನಾನು ಭವಿಷ್ಯ ಹೇಳುತ್ತಿಲ್ಲ. ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ನಮ್ಮದು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ನೀವೆಲ್ಲರೂ ಮುಂದೆ ಬಂದು ಪಕ್ಷ ಸಂಘಟನೆ ಮಾಡಿ. ಸಿದ್ದರಾಮಯ್ಯ ಮೊಮ್ಮಗನನ್ನು ರಾಜಕೀಯಕ್ಕೆ ತರುತ್ತೇನೆ ಅಂತಾರೆ. ಅದು ಕುಟುಂಬ ರಾಜಕಾರಣ ಅಲ್ವಾ? ಯಾರೂ ಟೀಕೆ ಮಾಡಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

suddiyaana