ಮುಂಗಾರು ಮಳೆ ಮತ್ತೆ ವಿಳಂಬ! – ಐಎಂಡಿ ಅಧಿಕಾರಿಗಳು ಹೇಳಿದ್ದೇನು?
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕೊರತೆ – 82 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ!
ಹವಾಮಾನ ಇಲಾಖೆ ಜೂನ್ 1 ಕ್ಕೂ ಮುಂಚಿತವಾಗಿ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಹೇಳಿತ್ತು. ಆದರೆ ಈಗ ಜೂನ್ 1ಕ್ಕೂ ಮುಂಚಿತವಾಗಿ ಮುಂಗಾರು ಆಗಮನ ಸಾಧ್ಯತೆ ಇಲ್ಲ. ಕೇರಳಕ್ಕೆ ಜೂನ್4ರಂದು ಮುಂಗಾರು ಮಳೆಯಾಗಲಿದ್ದು, ಕರ್ನಾಟಕದಲ್ಲಿ ಜೂನ್ ಎರಡನೇ ವಾರದಲ್ಲಿ ಮಳೆಗಾಲ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನವಾರ ಅರಬ್ಬೀ ಸಮದ್ರದಲ್ಲಿ ಚಂಡಮಾರುತದ ಸಂಭವನೀಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಆದರೆ ಅರಬ್ಬೀ ಸಮದ್ರದಲ್ಲಿ ಯಾವುದೇ ಚಂಡಮಾರುತದ ಸಂಭವನೀಯತೆ ವರದಿಯಾಗಿಲ್ಲ. ಈ ಹಿನ್ನೆಲೆ ಎಲ್ಲೆಡೆ ಮುಂಗಾರಿನ ಸಮಾನ ಹಂಚಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಹೀಗಾದಲ್ಲಿ ಕೃಷಿಯ ಮೇಲೆ ಹೆಚ್ಚಿನ ಪರಿಣಾಮವೇನು ಬೀರುವುದಿಲ್ಲವೆಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.