ಕುಸ್ತಿಪಟುಗಳ ಮೇಲೆ ಗುಂಡು ಹಾರಿಸುತ್ತೇವೆ ಎಂದ ಮಾಜಿ ಡಿಜಿಪಿ- ಬುಲೆಟ್‌ಗೆ ಎದೆಯೊಡ್ಡಲು ಸಿದ್ದ ಎಂದ ಬಜರಂಗ್ ಪೂನಿಯಾ

ಕುಸ್ತಿಪಟುಗಳ ಮೇಲೆ ಗುಂಡು ಹಾರಿಸುತ್ತೇವೆ ಎಂದ ಮಾಜಿ ಡಿಜಿಪಿ- ಬುಲೆಟ್‌ಗೆ ಎದೆಯೊಡ್ಡಲು ಸಿದ್ದ ಎಂದ ಬಜರಂಗ್ ಪೂನಿಯಾ

ಜಂತರ್ ಮಂತರ್​​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಅಗತ್ಯ ಬಿದ್ದರೆ ಗುಂಡು ಹಾರಿಸುತ್ತೇವೆ ಎಂದು ಕೇರಳದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎನ್‌ಸಿ ಅಸ್ತಾನಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬುಲೆಟ್​​​ಗೆ ಎದೆಯೊಡ್ಡಲು ಸಿದ್ದ ಎಂದು ಬಜರಂಗ್ ಪೂನಿಯಾ ಹೇಳಿದ್ದಾರೆ.

ಇದನ್ನೂ ಓದಿ:  ಬಿಜೆಪಿ ಹೀನಾಯ ಸೋಲಿಗೆ ಕಾರಣ ಕೇಳಿದ ಪ್ರಧಾನಿ – ಹಿರಿಯ ನಾಯಕರು ನೀಡಿದ ಮಾಹಿತಿಗಳೇನು?

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉದ್ಘಾಟಿಸಿದ ಹೊಸ ಸಂಸತ್ ಭವನದಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿರುವ ಧರಣಿ ಸ್ಥಳದಲ್ಲಿ ಪೊಲೀಸ್ ಮತ್ತು ಕುಸ್ತಿಪಟುಗಳ ನಡುವೆ ಎಳೆದಾಟ, ಬಂಧನದ ನಂತರ ಭಾನುವಾರ ರಾತ್ರಿ, ಇದೇ ಸುದ್ದಿಯನ್ನು ಅಸ್ತಾನಾ ಟ್ವೀಟ್ ಮಾಡಿದ್ದಾರೆ. ಅಗತ್ಯವಿದ್ದರೆ ಶೂಟ್ ಕೂಡ ಮಾಡುತ್ತೇವೆ. ನೀವು ಹೇಳಿದಾಗ ಅಲ್ಲ. ಇದೀಗ ನಾವು ಕಸದ ಚೀಲದಂತೆ ಎಳೆದು ಹೊರಹಾಕಿದ್ದೇವೆ. ಆರ್ಟಿಕಲ್ 129 ಪೊಲೀಸರಿಗೆ ಗುಂಡು ಹಾರಿಸುವ ಹಕ್ಕನ್ನು ನೀಡುತ್ತದೆ. ಸರಿಯಾದ ಸಂದರ್ಭಗಳಲ್ಲಿ, ಆ ಆಸೆ ಕೂಡ ಈಡೇರುತ್ತದೆ. ಅದನ್ನು ಅರ್ಥ ಮಾಡಿಕೊಳ್ಳಬೇಕಾದರೆ ವಿದ್ಯಾವಂತರಾಗಿರಬೇಕು. ಮತ್ತೊಮ್ಮೆ ಪೋಸ್ಟ್ ಮಾರ್ಟಮ್ ಟೇಬಲ್ ಮೇಲೆ ಭೇಟಿಯಾಗೋಣ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿಯ ಟ್ವೀಟ್​​​ಗೆ ಪ್ರತಿಕ್ರಿಯಿಸಿದ ಬಜರಂಗ್ ಪುನಿಯಾ ಈ ಐಪಿಎಸ್ ಅಧಿಕಾರಿ ನಮ್ಮ ಮೇಲೆ ಗುಂಡು ಹಾರಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸಹೋದರ, ನಾನು ಇಲ್ಲಿ ಮುಂದೆ ನಿಂತಿದ್ದೇನೆ. ಗುಂಡು ಹೊಡೆಯಲು ಎಲ್ಲಿಗೆ ಬರಬೇಕು ಹೇಳಿ ಬೆನ್ನು ತೋರಿಸುವುದಿಲ್ಲ, ನಿಮ್ಮ ಗುಂಡಿಗೆ ಎದೆಯೊಡ್ಡುತ್ತೇನೆ ಎಂದು ಪ್ರತಿಜ್ಞೆ ಮಾಡುತ್ತೇನೆ. ಇದೊಂದು ಬಾಕಿ ಇತ್ತು, ಈಗ ನಮ್ಮೊಂದಿಗೆ ಮಾಡಿ ಎಂದು ಪುನಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಭದ್ರತಾ ಸಿಬ್ಬಂದಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸಿದ ನಂತರ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಪುನಿಯಾ ಮತ್ತು ಇತರ ಪ್ರತಿಭಟನಾಕಾರರ ವಿರುದ್ಧ ಗಲಭೆ ಮತ್ತು ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರ ರಾಜಧಾನಿಯಾದ್ಯಂತ 700 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಕುಸ್ತಿಪಟುಗಳು ಸೇರಿದಂತೆ 109 ಪ್ರತಿಭಟನಾಕಾರರನ್ನು ಜಂತರ್ ಮಂತರ್‌ನಲ್ಲಿ ಬಂಧಿಸಲಾಗಿತ್ತು. ಬಂಧಿತರಾದ ಮಹಿಳೆಯರನ್ನು ಸಂಜೆ ನಂತರ ಬಿಡುಗಡೆ ಮಾಡಲಾಗಿದೆ.

 

suddiyaana