ಕಂದಕಕ್ಕೆ ಉರುಳಿ ಬಿದ್ದ ಬಸ್ – 10 ಮಂದಿ ಸಾವು, 30 ಜನರಿಗೆ ಗಾಯ
ಶ್ರೀನಗರ: ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಮಂದಿ ಮೃತಪಟ್ಟ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ (ಮೇ.30 ರಂದು) ನಡೆದಿದೆ.
ಮಂಗಳವಾರ ಮುಂಜಾನೆ ಅಮೃತಸರದಿಂದ ಮಾತಾ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆ ತರುತ್ತಿದ್ದ ಬಸ್ ಜಜ್ಜರ್ ಕೋಟ್ಲಿ ಬಳಿ ಸೇತುವೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: 40 ಚೂಯಿಂಗ್ ಗಮ್ ನುಂಗಿದ್ದ 5 ವರ್ಷದ ಬಾಲಕ – ತೀವ್ರ ಹೊಟ್ಟೆನೋವು.. ಮುಂದೇನಾಯ್ತು ಗೊತ್ತಾ..?
ದೇವರ ದರ್ಶನಕ್ಕೆಂದು ಬಸ್ಸಿನಲ್ಲಿ ಒಟ್ಟು 75 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅವಘಡದಲ್ಲಿ ಗಾಯಗೊಂಡವರನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಕಮರಿಗೆ ಬಿದ್ದ ಒಂದು ದಿನದ ನಂತರ ಈ ಘಟನೆ ನಡೆದಿದೆ. ವರದಿಯ ಪ್ರಕಾರ, ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ.
ಇನ್ನು ಸೋಮವಾರ ಮೈಸೂರಿನ ಟಿ.ನರಸೀಪುರದಲ್ಲಿ ಬಸ್ -ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 10 ಮಂದಿ ಮೃತಪಟ್ಟ ಭೀಕರ ಘಟನೆ ನಡೆದಿತ್ತು.