APL, BPL ಎನ್ನುವ ಷರತ್ತುಗಳಿಲ್ಲ.. ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ – ಸಾರಿಗೆ ಸಚಿವರಿಂದ ಮಹತ್ವದ ಘೋಷಣೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 5 ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಚರ್ಚೆಯಾಗುತ್ತಿದೆ. ಅದರಲ್ಲೂ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಮಂಗಳವಾರ (ಮೇ.30) ಮಹತ್ವದ ಘೋಷಣೆ ಹೊರ ಬಿದ್ದಿದೆ. ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಾಮಲಿಂಗಾ ರೆಡ್ಡಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.
ಇದನ್ನೂ ಓದಿ : ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ್ ನೇಮಕ – ಸರ್ಕಾರದಿಂದ ಯಾವೆಲ್ಲಾ ಅಧಿಕಾರಿಗಳ ವರ್ಗಾವಣೆ?
ಬೆಂಗಳೂರಿನ ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ ಎಂದರು.
ಕೊರೊನಾ ಸಂದರ್ಭದಲ್ಲಿ ಸಾರಿಗೆ ಇಲಾಖೆಗೆ ಆದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.