ತಿಂಗಳ ಮೊದಲ ದಿನವೇ ಖುಷಿ ಸುದ್ದಿ – ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

ತಿಂಗಳ ಮೊದಲ ದಿನವೇ ಖುಷಿ ಸುದ್ದಿ – ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

ನವದೆಹಲಿ: ಜೂನ್‌ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ ಪಿಜಿ ಗ್ಯಾಸ್‌ ಸಿಲಿಂಡರ್‌ ಗಳ ಬೆಲೆ ಪರಿಷ್ಕರಿಸಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆ ಕಂಡಿದೆ.

ಇದನ್ನೂ ಓದಿ: ಇನ್ನು ಮುಂದೆ ಈ ರಾಜ್ಯದಲ್ಲೂ 100 ಯೂನಿಟ್‌ ವಿದ್ಯುತ್‌ ಉಚಿತ!

19 ಕೆಜಿ ತೂಕದ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆಯಾಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಆದರೆ ಗೃಹ ಬಳಕೆ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 171.50 ರೂ. ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್‌ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಸದ್ಯ ವಾಣಿಜ್ಯ ಸಿಲಿಂಡರ್‌ ಬೆಲೆ ಕೋಲ್ಕತ್ತಾದಲ್ಲಿ 1,875.50 ರೂ., ಮುಂಬೈನಲ್ಲಿ 1,725 ರೂ., ಚೆನ್ನೈನಲ್ಲಿ 1,937ರೂ. ಗಳಿಗೆ ಮಾರಾಟವಾಗುತ್ತಿದೆ.

suddiyaana