ಚಾಮರಾಜನಗರದಲ್ಲಿ ಲಘು ವಿಮಾನ ಪತನ – ಪೈಲಟ್‌ಗಳು ಪಾರಾಗಿದ್ದು ಹೇಗೆ ಗೊತ್ತಾ?
ಚಾಮರಾಜನಗರ: ಲಘು ವಿಮಾನವೊಂದು ಪತನಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಭೋಗಪುರದ ಬಳಿ ನಡೆದಿದೆ.
ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ನಿಂದ ತೆರಳಿದ್ದ ವಿಮಾನ, ಗುರುವಾರ ಮಧ್ಯಾಹ್ನ 12 ಗಂಟೆಗೆ ವೇಳೆಗೆ ಪತನಗೊಂಡು ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇದನ್ನೂ ಓದಿ: 66 ವರ್ಷಗಳ ದಾಖಲೆ ಮುರಿದ ಬೆಂಗಳೂರು ಮಳೆ! – ಮೇ ತಿಂಗಳಿನಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ?
ಘಟನೆಯಲ್ಲಿ ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೊಂದರಲ್ಲಿ ಬಿದ್ದಿವೆ. ಇನ್ನು ಕೆಲ ಭಾಗಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿವೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲಘು ವಿಮಾನ ಪತನಕ್ಕೆ ಕಾರಣ ಏನು ಎಂಬುವುದು ಇನ್ನೂ ತಿಳಿದುಬಂದಿಲ್ಲ.