ವಾಟ್ಸಾಪ್ ಯೂನಿವರ್ಸಿಟಿಯ ಪದವಿ ಪರಿಗಣಿಸುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದ್ದು ಯಾರಿಗೆ?

ವಾಟ್ಸಾಪ್ ಯೂನಿವರ್ಸಿಟಿಯ ಪದವಿ ಪರಿಗಣಿಸುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದ್ದು ಯಾರಿಗೆ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಟ್ವೀಟ್‌ ಸಮರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ವಿರೋಧ ಪಕ್ಷದ ನಾಯಕರು ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳ ವಿರುದ್ದ ಟ್ವೀಟ್‌ ಸಮರ ಮುಂದುವರಿಸುತ್ತಲೇ ಬಂದಿದೆ. ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೇ ಶೀಘ್ರವೇ ಜಾರಿಗೊಳಿಸಬೇಕು ಎಂದು ಬಿಜೆಪಿ ಹೇಳುತ್ತಾ ಬಂದಿತ್ತು. ಯೋಜನೆ ಜಾರಿಯಾದ ಬಳಿಕ ಕಾಂಗ್ರೆಸ್‌ ಬಿಜೆಪಿಗೆ ಟಕ್ಕರ್‌ ನೀಡಿತ್ತು.

ಇದನ್ನೂ ಓದಿ: ʼದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!ʼ – ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೆಸ್‌

ಇದೀಗ ಕಾಂಗ್ರೆಸ್‌ ಗೆ ಬಿಜೆಪಿ ಮತ್ತೆ ಪ್ರತಿಕ್ರಿಯೆ ನೀಡಿದೆ “ಖಂಡಿತಾ ಸ್ವಾಮಿ…. ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ ರಾಹುಲ್ ಗಾಂಧಿಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ|| ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ” ಎಂದು ಟ್ವೀಟ್ ಮಾಡಿದೆ.

ಇದೀಗ ಬಿಜೆಪಿ ಟ್ವೀಟ್​ಗೆ ತಿರುಗೇಟು ನೀಡಿದ ಕಾಂಗ್ರೆಸ್, “ಬಿಜೆಪಿಯವರೇ ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, ಡಾ.ಯತೀಂದ್ರ ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. ಸೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ, ಹಾಗೆಯೇ ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ.ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ)” ಎಂದು ಟ್ವೀಟ್ ಮಾಡಿ ತಿಳಿಸಿದೆ.

suddiyaana