‘ರಾಜಕಾರಣ ಬೇಡ ಅನ್ನಿಸಿದೆ, ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನಿಸಿಲ್ಲ’ – ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ವಾ ಡಿ.ಕೆ ಸುರೇಶ್?

‘ರಾಜಕಾರಣ ಬೇಡ ಅನ್ನಿಸಿದೆ, ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನಿಸಿಲ್ಲ’ – ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ವಾ ಡಿ.ಕೆ ಸುರೇಶ್?

ಲೋಕಸಭಾ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿ ಇದೆ. ಆದರೆ ಪಕ್ಷಗಳಲ್ಲಿ ಈಗಿನಿಂದಲೇ ಲೆಕ್ಕಾಚಾರಗಳು ಶುರುವಾಗಿವೆ. ಹಾಗೇ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ಜೋರಾಗಿದೆ. ಆದರೆ ಈ ಬಾರಿ ಡಿಸಿಎಂ ಡಿ.ಕೆ ಶಿವಕುಮಾರ್ ಸೋದರ ಡಿ.ಕೆ ಸುರೇಶ್ ಚುನಾವಣೆಗೆ ಸ್ಪರ್ಧಿಸುತ್ತಾರೋ ಇಲ್ಲವೋ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಸಂಸದರು ನೀಡಿರುವ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇದನ್ನೂ ಓದಿ : ಗೊಂದಲ, ಗದ್ಧಲಗಳಿಗೆ ತೆರೆ ಎಳೆದ ಸಚಿವ ಕೆ.ಜೆ ಜಾರ್ಜ್ – ಫ್ರೀ ವಿದ್ಯುತ್ ಬೇಕೆಂದರೆ ಹೀಗೆ ನೋಂದಣಿ ಮಾಡಿ!

ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ. ಹೀಗಾಗಿ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲದಲ್ಲಿ ಇದ್ದೇನೆ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ. ಅವರ ಇದೇ ಮಾತು ಹತ್ತಾರು ಚರ್ಚೆಗಳಿಗೆ ಕಾರಣವಾಗಿದೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

2019ರ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಎರಡೂ ಪಕ್ಷಗಳಿಗೆ ಕೇವಲ ತಲಾ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಿಕ್ಕಿತ್ತು. ಕಾಂಗ್ರೆಸ್​ನಿಂದ ಡಿ.ಕೆ ಸುರೇಶ್ ಮಾತ್ರ ಗೆದ್ದಿದ್ದರು. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಮಾತ್ರ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಗೆದ್ದಿದ್ದು ಬಿಟ್ಟರೆ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಜಯಭೇರಿ ಬಾರಿಸಿದ್ದರು.

suddiyaana