ಆಸ್ತಿ ವಿವರ ಸಲ್ಲಿಸುವಂತೆ 224 ಶಾಸಕರಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ಗಡುವು – ಮೀರಿದ್ರೆ ಶಿಸ್ತುಕ್ರಮದ ಎಚ್ಚರಿಕೆ 

ಆಸ್ತಿ ವಿವರ ಸಲ್ಲಿಸುವಂತೆ 224 ಶಾಸಕರಿಗೆ ಲೋಕಾಯುಕ್ತ ನ್ಯಾಯಮೂರ್ತಿಗಳ ಗಡುವು – ಮೀರಿದ್ರೆ ಶಿಸ್ತುಕ್ರಮದ ಎಚ್ಚರಿಕೆ 

ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ತಿಂಗಳಾಗುತ್ತಿದೆ. ಆದರೆ 224 ಪೈಕಿ ಹಲವರು ತಮ್ಮ ಆಸ್ತಿ ವಿವರಗಳನ್ನ ಸಲ್ಲಿಕೆ ಮಾಡಿಲ್ಲ. ಹೀಗಾಗಿ ಆಸ್ತಿ ವಿವರ ಸಲ್ಲಿಕೆಗೆ ಲೋಕಾಯುಕ್ತ ನ್ಯಾಯಮೂರ್ತಿ ಗಡುವು ನೀಡಿದ್ದಾರೆ. ಹಾಗೇ ಶಿಸ್ತುಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ(Karnataka Lokayukta) ನ್ಯಾಯಮೂರ್ತಿ ಡೆಡ್​ಲೈನ್ ನೀಡಿದ್ದಾರೆ. ಇದೇ ಜೂನ್​​ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ (Karnataka Lokayukta Justice BS Patil)​ ಗಡುವು ನೀಡಿದ್ದಾರೆ. ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್​.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಜೂನ್‌ 11 ರಂದು ಶಕ್ತಿ ಯೋಜನೆಗೆ ಚಾಲನೆ – ಟಿಕೆಟ್‌.. ಟಿಕೆಟ್.. ಎಂದು ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂನ್ 30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಾರಿ ದಾಖಲೆಗಳ ಸಮೇತ ಮತ್ತೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಸಮಸ್ಯೆ ಆಗಬಾರದೆಂದು ಶಾಸಕರ ಕಡ್ಡಾಯ ಆಸ್ತಿ ವಿವರ ಪಡೆಯಲು ಲೋಕಾಯುಕ್ತ ಸೆಕ್ರೆಟರಿಗೆ ಸೂಚಿಸಿದ್ದಾರೆ.

ಜನಪ್ರತಿನಿಧಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ನೀಡಲೇ ಬೇಕಾಗಿರುವುದು ಕಾನೂನು. ಆದರೆ ಆಸ್ತಿ ವಿವರ ನೀಡುವಂತೆ ಲೋಕಾಯುಕ್ತ ಇಲಾಖೆ ಜನಪ್ರತಿನಿಧಿಗಳಿಗೆ ಹಲವು ಬಾರಿ ನೋಟೀಸ್ ನೀಡಿದ್ದರೂ, ಜನಪ್ರತಿನಿಧಿಗಳು ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಸಾಕಷ್ಟು ನಿದರ್ಶನಗಳಿವೆ.

suddiyaana