ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆ – ಒಟ್ಟಿಗೆ ಸ್ನಾನಮಾಡುತ್ತಿದ್ದ ಯುವಜೋಡಿಯ ದುರಂತ ಸಾವು..!

ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆ – ಒಟ್ಟಿಗೆ ಸ್ನಾನಮಾಡುತ್ತಿದ್ದ ಯುವಜೋಡಿಯ ದುರಂತ ಸಾವು..!

ಸದ್ಯದಲ್ಲೇ ಹಸೆಮಣೆ ಏರಬೇಕಾದ ಜೋಡಿಯೊಂದು ಜೊತೆಯಲ್ಲೇ ಪ್ರಾಣಬಿಟ್ಟ ದುರಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅದು ಕೂಡಾ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಜೋಡಿ ಜೀವಗಳು ಪ್ರಾಣಬಿಟ್ಟಿವೆ. ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್​​ನ ಸುಧಾರಾಣಿ ಮೃತ ದುರ್ವೈವಿಗಳು. ಈ ಜೋಡಿ ತಮ್ಮ ವಿವಾಹಕ್ಕೆ ಸಿದ್ಧತೆ ನಡೆಸುವಾಗಲೇ ಈ ರೀತಿಯಾಗಿದೆ.

ಇದನ್ನೂ ಓದಿ: ಲಗೇಜ್ ಟಿಕೆಟ್ ಪಡೆಯಲು ಮಹಿಳೆಯರ ತಕರಾರು –  ಬಸ್‌ನಿಂದ ಕೆಳಗಿಳಿಸಿ ಹೊರಟ ಕಂಡಕ್ಟರ್

ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್​ ಗೀಸರ್​ ಆನ್ ಮಾಡಿ ಇಬ್ಬರೂ ಬಾತ್​ರೂಮ್​ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್​ ಗೀಸರ್​ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್​ರೂಮ್​ನಲ್ಲೇ ಇಬ್ಬರೂ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಇಬ್ಬರ ಬದುಕಲ್ಲಿ ವಿಧಿಯಾಟವೇ ಬೇರೆಯಾಗಿದೆ. ಹಸೆಮಣೆ ಏರಬೇಕಾದ ಜೋಡಿ ಮಸಣ ಸೇರಿದೆ.

suddiyaana