ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ರದ್ದು – ಪಠ್ಯಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಅಸ್ತು!

ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ರದ್ದು – ಪಠ್ಯಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಅಸ್ತು!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ತಿಂಗಳು ತುಂಬಿದೆ. ಈಗಾಗಲೇ ಚುನಾವಣೆ ಪೂರ್ವ ತಾವು ನೀಡಿದ್ದ ಗ್ಯಾರಂಟಿಗಳನ್ನ ಒಂದೊಂದಾಗಿಯೇ ಜಾರಿಗೊಳಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಕೆಲವೊಂದು ಕಾಯ್ದೆಗಳನ್ನೂ ರದ್ದುಗೊಳಿಸುತ್ತಿದ್ದಾರೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಪಡಿಸಲು ನಿರ್ಧರಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಶಾಲಾ ಪಠ್ಯ ಪುಸ್ತಕರ ಪರಿಷ್ಕರಣೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಇದರ ಜೊತೆಗೆ ಭಾರಿ ವಿವಾದ ಸೃಷ್ಟಿಸಿದ್ದ ಎಂಪಿಎಂಸಿ ಕಾಯ್ದೆ ರದ್ದುಪಡಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

ಇದನ್ನೂ ಓದಿ : ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ನಿರಾಕರಣೆ – ʼಮೋದಿ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ‌ʼ ಎಂದ ಕಾಂಗ್ರೆಸ್

ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲಾಗಿದೆ. ಬಿಜೆಪಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿಆರ್ ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಅನುಮೋದನೆ ನೀಡಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಕ್ಕಳಿಗೆ ಈಗಾಗಲೇ ಪಠ್ಯ ವಿತರಿಸಲಾಗಿದೆ. ಹೀಗಾಗಿ ಅವುಗನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಂತರ ರೂಪಾಯಿ ಹಣ ವ್ಯಯಿಸಬೇಕು. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. 6 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. ನಮ್ಮ ಮಕ್ಕಳಿಗೆ ಯಾವ ಪಠ್ಯ ಅಗತ್ಯವಿದೆ ಅನ್ನೋದನ್ನು ಮಾತ್ರ ಇರಿಸಲಾಗಿದೆ. ಅನಗತ್ಯ ಪಠ್ಯಗಳನ್ನು ತೆಗೆಯಲಾಗಿದೆ. ತೆಗೆದ ಪಠ್ಯದ ಜಾಗದಲ್ಲಿ ಅಬೇಂಡ್ಕರ್, ನೆಹರೂ ಪಠ್ಯಗಳನ್ನು ಸೇರಿಸಲಾಗಿದೆ ಎಂದಿದ್ದಾರೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಇದಕ್ಕಾಗಿ ವಿಶೇಷ ಒತ್ತು ನೀಡಲಾಗಿದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರಗೀತಿ, ನಾಡಗೀತೆ ಜೊತೆಗೆ ಸಂವಿಧಾನ ಪೀಠಿಕೆ ಓದಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಇದೇ ವೇಳೆ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಹಾಗೇ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ನಿರ್ಧಾರ ಮಾಡಿದೆ. ಇದರಿಂದ ರೈತರಿಗೆ ನಷ್ಟವಾಗಿದೆ ಹಾಗೂ ಅವಲಂಭಿತರಿಗೆ ನಷ್ಟವಾಗಿದೆ. ಈ‌ ಹಿನ್ನೆಲೆಯಲ್ಲಿ ಹಳೆ ಎಪಿಎಂಸಿ ಕಾಯ್ದೆಯಲ್ಲಿ ಕೆಲವೊಂದು ಮಾರ್ಪಾಡುಗಳ ಮಾಡಿ ಮುಂಬರುವ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.

suddiyaana