ಡಿಕೆಶಿ, ಡಿ.ಕೆ ಸುರೇಶ್​ ರಿಂದ ದ್ವೇಷದ ರಾಜಕಾರಣ – ಅಧಿಕಾರಿಗಳ ಅಮಾನತು ವಿಚಾರಕ್ಕೆ ಮುನಿರತ್ನ ಆರೋಪ

ಡಿಕೆಶಿ, ಡಿ.ಕೆ ಸುರೇಶ್​ ರಿಂದ ದ್ವೇಷದ ರಾಜಕಾರಣ – ಅಧಿಕಾರಿಗಳ ಅಮಾನತು ವಿಚಾರಕ್ಕೆ ಮುನಿರತ್ನ ಆರೋಪ

ಒಂದಲ್ಲ ಎರಡಲ್ಲ.. ಬರೋಬ್ಬರಿ 250 ಕೋಟಿ ಮೊತ್ತದ ಬಿಲ್ ಪಾವತಿ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಸಮರಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಆರ್ ಆರ್ ನಗರ ಕ್ಷೇತ್ರದ ಹಾಲಿ ಶಾಸಕ ಮುನಿರತ್ನ ಆರೋಪ ಮಾಡಿದ್ದಾರೆ.

ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್​ ಪಾವತಿ ಮಾಡಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಆರ್​ಆರ್​ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ಸೇರಿದಂತೆ 11 ಮಂದಿಯನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಮುನಿರತ್ನ ಆಡಳಿತಾರೂಢ ಕಾಂಗ್ರೆಸ್, ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ  ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ʼ40% ಕಮಿಷನ್ ಹಗರಣದ ತನಿಖೆ ಉಚಿತ, ನಿಮಗೆ ಶಿಕ್ಷೆ ಖಚಿತʼ! – ಬಿಜೆಪಿಗೆ  ಕಾಂಗ್ರೆಸ್‌ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ (DK Suresh) ಅವರು ನನ್ನ ವಿರುದ್ಧ ದ್ವೇಷದ ರಾಜಕಾರಣ ಆರಂಭಿಸಿದ್ದಾರೆ ಎಂದು ಮಾಜಿ ಸಚಿವ, ಆರ್‌ಆರ್‌ ನಗರ ಶಾಸಕ ಮುನಿರತ್ನ (Munirathna) ಆರೋಪ ಮಾಡಿದ್ದಾರೆ. 11 ಮಂದಿ ಬಿಬಿಎಂಪಿ ಇಂಜಿನಿಯರ್‌ಗಳ ಅಮಾನತು ವಿಚಾರದಲ್ಲಿ ನನ್ನ ಹೆಸರನ್ನು ವಿವಾದಕ್ಕೆ ಎಳೆದು ತರುತ್ತಿರುವುದು ಈಗ ಆರಂಭವಷ್ಟೇ, ಅವರು ಇನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ನನ್ನ ವಿರುದ್ಧ ದ್ವೇಷದ ರಾಜಕಾರಣ ನಡೆಸಲಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.

ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ ಎಂದು ಹೇಳಿ ನಕಲಿ ಬಿಲ್ ಸೃಷ್ಟಿಸಿದ ಆರೋಪದ ಮೇಲೆ ಬಿಬಿಎಂಪಿಯ 11 ಮಂದಿ ಭ್ರಷ್ಟ ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಭ್ರಷ್ಟ ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ ಎಂದು 250 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ನಕಲಿ ಬಿಲ್‌ ಸೃಷ್ಟಿಸಿ ದುಡ್ಡು ಕೊಳ್ಳೆ ಹೊಡೆದಿದ್ದರು. ಈ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಬಿಬಿಎಂಪಿಯ ಹನ್ನೊಂದು ಮಂದಿ ಭ್ರಷ್ಟ ಇಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಹಣದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಾವತಿ ಮಾಡಿದ ಆರೋಪಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿಕೆ ಸುರೇಶ್ ಅವರು ದೂರನ್ನೂ ನೀಡಿದ್ದರು. ಅದರನ್ವಯ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ 11 ಮಂದಿ ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.

suddiyaana