ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಬದಲಾವಣೆ – ಅರ್ಜಿ ಸಲ್ಲಿಕೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಬದಲಾವಣೆ – ಅರ್ಜಿ ಸಲ್ಲಿಕೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

ಶಕ್ತಿ ಯೋಜನೆ ಮೂಲಕ ಈಗಾಗಲೇ ರಾಜ್ಯಾದ್ಯಂತ ಫ್ರೀ ಸಂಚಾರ ಮಾಡುತ್ತಿರುವ ಮಹಿಳೆಯರ ಕಣ್ಣು ಈಗ ಗೃಹಲಕ್ಷ್ಮೀ ಯೋಜನೆಯತ್ತ ನೆಟ್ಟಿದೆ. ಪ್ರತೀ ತಿಂಗಳು ಮನೆ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಹಾಕುವುದಾಗಿ ಸರ್ಕಾರ ಘೋಷಣೆ ಮಾಡಿದ್ದು ಇದೀಗ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ ಮಾಡಲಾಗಿದ್ದು, ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಹೇಳಿಕೆಯೊಂದನ್ನ ನೀಡಿದ್ದಾರೆ.

ಇದನ್ನೂ ಓದಿ : ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಡೇಟ್‌ ಫಿಕ್ಸ್‌! – ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಗೃಹಲಕ್ಷ್ಮೀ (Gruha Lakshmi Scheme) ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ ಆಗುತ್ತದೆ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕೆಂದು ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ. ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿನ (Gram Panchayat) ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಈಗಾಗಲೆ ಅಧಿಕಾರಿಗಳು ಸಾಫ್ಟ್​ವೇರ್​​/ಅಪ್ಲಿಕೇಶನ್​ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್​​​ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದ್ದಾರೆ.

 ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ

*ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ

*ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)

*ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.

*ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.

*ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.

*ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) 1902 ಗೆ ಸಂಪರ್ಕಿಸಬಹುದಾಗಿದೆ.

suddiyaana