ಜನಗಣ ಮನ ಹಾಡಿ ಪ್ರಧಾನಿ ಮೋದಿಯವರ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕದ ಖ್ಯಾತ ಗಾಯಕಿ

ಜನಗಣ ಮನ ಹಾಡಿ ಪ್ರಧಾನಿ ಮೋದಿಯವರ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕದ ಖ್ಯಾತ ಗಾಯಕಿ

ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಉಭಯ ರಾಷ್ಟ್ರಗಳ ನಡುವೆ ರಕ್ಷಣಾ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ತಮ್ಮ ಐತಿಹಾಸಿಕ ಅಮೆರಿಕ ಭೇಟಿಯನ್ನು ಮುಗಿಸಿದ ನಂತರ ಈಜಿಪ್ಟ್‌ಗೆ ತೆರಳಿದ್ದಾರೆ. ಈಜಿಪ್ಟ್‌ಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದ್ದು, ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಈಜಿಪ್ಟ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಯೋಗವು ಜಗತ್ತನ್ನು ಒಂದುಗೂಡಿಸುತ್ತದೆ ಎಂದ ಪ್ರಧಾನಿ ಮೋದಿ

ಇನ್ನು ಅಮೆರಿಕ ಪ್ರವಾಸದ ವೇಳೆ ಸಮಾರೋಪ ಕಾರ್ಯಕ್ರಮದಲ್ಲಿ ವಿದೇಶಿ ಗಾಯಕಿಯೊಬ್ಬರು ಭಾರತದ ರಾಷ್ಟ್ರಗೀತೆ ಜನಗಣ ಮನ ಹಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದ ಘಟನೆ ನಡೆದಿದೆ. ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಖ್ಯಾತ ಹಾಲಿವುಡ್ ನಟಿ ಮತ್ತು ಗಾಯಕಿ 38 ವರ್ಷದ ಮೇರಿ ಮಿಲ್‌ಬೆನ್ (Ms Millben) ಅವರು ಭಾರತೀಯ ರಾಷ್ಟ್ರಗೀತೆ ‘ಜನ ಗಣ ಮನ’ ಗೀತೆಯನ್ನು ಮನಮೋಹಕವಾಗಿ ಹಾಡಿದರು. ಈ ವೇಳೆ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್ ಅವರು ಭಾರತದ ರಾಷ್ಟ್ರಗೀತೆಯನ್ನು ಹಾಡಿದ ನಂತರ ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು.

ಇದೇ ಕಾರ್ಯಕ್ರಮದಲ್ಲಿ ಮಿಲ್ಬೆನ್ ಓಂ ಜೈ ಜಗದೀಶ್ ಹರೆ ಹಾಡನ್ನೂ ಕೂಡ ಹಾಡಿದ್ದು, ಮೇರಿ ಮಿಲ್ಬೆನ್ ಅವರ ಅದ್ಭುತ ಪ್ರದರ್ಶನವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ನಂತರ ಮೇರಿ ಮಿಲ್ಬೆನ್ ಬಂದು ಪ್ರಧಾನಿ ಮೋದಿಯವರ ಪಾದ ಮುಟ್ಟಿ ನಮಸ್ಕರಿಸಿದರು. ಮೇರಿ ಮಿಲ್ಬೆನ್ ಅವರ ಪಾದಗಳನ್ನು ಮುಟ್ಟುತ್ತಿರುವುದನ್ನು ನೋಡಿದ ಪ್ರಧಾನಿ ಮೋದಿ ಅವರನ್ನು ತಡೆದು ಹಸ್ತಲಾಘವ ಮಾಡಿದರು. ಇದಾದ ಬಳಿಕ ಪ್ರಧಾನಿ ಮೋದಿ ಅವರು ಭಾರತೀಯ ಶೈಲಿಯಲ್ಲಿ ಮೇರಿ ಮಿಲ್ಬೆನ್ ಅವರಿಗೆ ಕೈಮುಗಿದು ನಮಸ್ಕರಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಮೇರಿ ಮಿಲ್ಬೆನ್ ಕೂಡ ಕೈಮುಗಿದು ಪ್ರಧಾನಿಯ ಶುಭಾಶಯವನ್ನು ಸ್ವೀಕರಿಸಿದರು.

suddiyaana