ಐದು ‘ವಂದೇ ಭಾರತ್ ಎಕ್ಸ್ಪ್ರೆಸ್ʼ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ – ಬೆಂಗಳೂರು To ಧಾರವಾಡ ಇಂದಿನಿಂದ ಸಂಚಾರ
ಮಧ್ಯಪ್ರದೇಶ: ಧಾರವಾಡ – ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಬಿಪರ್ ಜಾಯ್ 1977ರ ಬಳಿಕ ಉದ್ಭವಿಸಿದ ಅತೀ ದೀರ್ಘಾವಧಿಯ ಚಂಡಮಾರುತ!
ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಉದ್ಘಾಟನೆ ಬಳಿಕ ಬಳಿಕ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಬೆಂಗಳೂರಿಗೆ ಹೊರಟಿದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಭರದ್ವಾಡ ಮತ್ತಿತರರು ಭಾಗವಹಿಸಿದ್ದಾರೆ.