ಸಿಎಂ ಕಚೇರಿಯಲ್ಲೇ ವರ್ಗಾವಣೆ ದಂಧೆಗೆ ʼಹುಂಡಿʼ – ‘ಕಾಸಿಗಾಗಿ ಪೋಸ್ಟಿಂಗ್ʼ ಕಾಂಗ್ರೆಸ್ನ 6 ನೇ ಗ್ಯಾರಂಟಿ! – ಹೆಚ್ಡಿಕೆ ಆರೋಪ
ಬೆಂಗಳೂರು: ಕಾಂಗ್ರೆಸ್ನ ಪಂಚಗ್ಯಾರಂಟಿಗಳ ಬಗ್ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರುತ್ತಲೇ ಇದ್ದಾರೆ. ಇದೀಗ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ‘ಕಾಸಿಗಾಗಿ ಪೋಸ್ಟಿಂಗ್!ʼ ಎಂದು ಹೆಚ್ಡಿಕೆ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು ‘ಕಾಸಿಗಾಗಿ ಪೋಸ್ಟಿಂಗ್!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕಂತೆ ಕಂತೆ ಹಣ, ಚಿನ್ನಾಭರಣ.. ಮನೆಯಲ್ಲಿ ಆಮೆಗಳು ಪತ್ತೆ – ಭ್ರಷ್ಟಾಧಿಕಾರಿಗಳ ಸಂಪತ್ತು ಬಯಲಿಗೆಳೆದ ಲೋಕಾಯುಕ್ತ
ಸತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವಣೆ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ ಎಂದು ಪ್ರಶ್ನಿಸಿದ್ದಾರೆ.
4 ಶಿಫಾರಸುಗಳ ಹಿಂದಿರುವ ಆ ‘ಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ‘ರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ.
ಈ ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ‘ಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ‘ಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ‘ಬಂದಿದ್ದನ್ನು ಬಿಡದೇ ಬಾಚಿಕೋʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ‘ಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಪಂಚಗ್ಯಾರಂಟಿಗಳ @INCKarnataka ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.
ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ
ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ. 1/4#CashForPostinghttps://t.co/DWNsAw8Uwh— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 28, 2023