ಬಿಬಿಎಂಪಿ ವ್ಯಾಪ್ತಿಯ 225 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭ – ವೈದ್ಯರ ಕೊರತೆಗೂ ಪರಿಹಾರ ಹುಡುಕಿದ ಬಿಬಿಎಂಪಿ
ಬೆಂಗಳೂರು: ರಾಜ್ಯ ಸರ್ಕಾರವು ಬಿಬಿಎಂಪಿಯ 243 ವಾರ್ಡ್ ಸೇರಿದಂತೆ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಆರಂಭಿಸುವುದಕ್ಕೆ ಯೋಜನೆ ರೂಪಿಸಲಾಗಿತ್ತು. ಇದೀಗ ಬಿಬಿಎಂಪಿಯ ವ್ಯಾಪ್ತಿಯ 243 ವಾರ್ಡ್‌ಗಳ ಪೈಕಿ 225 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಕಾರ್ಯಾರಂಭಗೊಂಡಿವೆ.
ಇದನ್ನೂ ಓದಿ: ಜು. 1 ರಿಂದ ಅಮರನಾಥ ಯಾತ್ರೆ ಆರಂಭ – ಯಾತ್ರಿಗಳ ಭದ್ರತೆಗೆ ಡ್ರೋನ್ ಕಣ್ಗಾವಲು
ಈ ಬಗ್ಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ ತ್ರಿಲೋಕಚಂದ್ರ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಬಿಬಿಎಂಪಿಯ 243 ವಾರ್ಡ್ ಸೇರಿದಂತೆ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಆರಂಭಿಸುವುದಕ್ಕೆ ಯೋಜನೆ ರೂಪಿಸಲಾಗಿತ್ತು. ಈ ಪೈಕಿ ಬೆಂಗಳೂರಿನ 108 ವಾರ್ಡ್‌ಗಳಲ್ಲಿ ಕಳೆದ ಜನವರಿಯಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಲಾಗಿತ್ತು. ಬಾಕಿ ಉಳಿದ ವಾರ್ಡ್‌ಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡು ಇದೀಗ ಒಟ್ಟು 225 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ನಮ್ಮ ಕ್ಲಿನಿಕ್ ಆರಂಭದಲ್ಲಿ ವೈದ್ಯರ ಕೊರತೆ ಉಂಟಾಗಿತ್ತು. ಇದೀಗ ವೈದ್ಯರ ಕೊರತೆಗೂ ಬಿಬಿಎಂ ಪರಿಹಾರ ಹುಡುಕಿದೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನಮ್ಮ ಕ್ಲಿನಿಕ್ ಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ 225 ‘ನಮ್ಮ ಕ್ಲಿನಿಕ್’ನಲ್ಲಿ 221 ನಸ್೯ಗಳು, 222 ವೈದ್ಯರು, 223 ಲ್ಯಾಬ್ ಟೆಕ್ನಿಷಿಯನ್, 232 ಮಂದಿ ಗ್ರೂಪ್ ಡಿ ಸಿಬ್ಬಂದಿ ನಿಯೋಜಿಸಲಾಗುತ್ತದೆ. ‘ನಮ್ಮ ಕ್ಲಿನಿಕ್’ ಆರಂಭವಾದಗಿನಿಂದಲೂ 2.29 ಲಕ್ಷ ಮಂದಿ ಭೇಟಿ ನೀಡಿದ್ದು, 87,055 ಮಂದಿ ವಿವಿಧ ರೋಗ ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
2.29 ಲಕ್ಷ ಮಂದಿ ಭೇಟಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಆರಂಭಿಸಿದ ಬಳಿಕ ಈವರೆಗೆ ಒಟ್ಟು 2,29, 473 ಮಂದಿ ಭೇಟಿ ನೀಡಿ ತಪಾಸಣೆಗೆ ಒಳಪಟ್ಟು ವೈದ್ಯರಿಂದ ಅಗತ್ಯ ಸಲಹೆ, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಪೈಕಿ 87,055 ಮಂದಿ ವಿವಿಧ ರೋಗ ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.