ಭಾನುವಾರ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ 2 ಗಂಟೆ ವ್ಯತ್ಯಯ!

ಭಾನುವಾರ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ 2 ಗಂಟೆ ವ್ಯತ್ಯಯ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ಭಾನುವಾರ ಮುಂಜಾನೆ 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮ ತಿಳಿಸಿದೆ.

ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾಲಯಕ್ಕೆ ಮೆಟ್ರೋದಲ್ಲಿ ಪ್ರಯಾಣ – ಪ್ರಯಾಣಿಕರೊಂದಿಗೆ ಪ್ರಧಾನಿ ಮೋದಿ ಸಂವಾದ..!

ನಮ್ಮ ಮೆಟ್ರೋ ರೈಲು ನಿಗಮ ಈ ಬಗ್ಗೆ ಮಾಹಿತಿ ನೀಡಿದ್ದು, ಜು. 02 ರಂದು(ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರ ವ್ಯತ್ಯಯವಾಗಲಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ, ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

suddiyaana