ಗುಂಪುಗೂಡಂಗಿಲ್ಲ, ಮೆರವಣಿಗೆ ಮಾಡಂಗಿಲ್ಲ.. ಸುತ್ತಮುತ್ತ ನಿಷೇಧಾಜ್ಞೆ – ಬಜೆಟ್ ಅಧಿವೇಶನಕ್ಕೆ ಸಜ್ಜಾಯ್ತು ವಿಧಾನಸೌಧ

ಗುಂಪುಗೂಡಂಗಿಲ್ಲ, ಮೆರವಣಿಗೆ ಮಾಡಂಗಿಲ್ಲ.. ಸುತ್ತಮುತ್ತ ನಿಷೇಧಾಜ್ಞೆ – ಬಜೆಟ್ ಅಧಿವೇಶನಕ್ಕೆ ಸಜ್ಜಾಯ್ತು ವಿಧಾನಸೌಧ

ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಈಗಾಗಲೇ 5 ಗ್ಯಾರಂಟಿಗಳನ್ನ ಒಂದೊಂದಾಗಿಯೇ ಜಾರಿ ಮಾಡುತ್ತಿದೆ. ಜೂನ್ 11ರಂದು ಶಕ್ತಿ ಯೋಜನೆ ಜಾರಿಯಾಗಿದ್ದು ಜುಲೈ 1ರಿಂದ ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳು ಜಾರಿಯಾಗಿವೆ. ಇದೀಗ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. 1 ವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಶುಕ್ರವಾರ ಬಜೆಟ್ ಮಂಡನೆ ಆಗಲಿದೆ.

ಇದನ್ನೂ ಓದಿ : ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ! – ಜಾಹೀರಾತು ಮೂಲಕ ಬಿಜೆಪಿಯನ್ನು ಕಾಲೆಳೆದ ಕಾಂಗ್ರೆಸ್‌  

ಸೋಮವಾರ (ಜುಲೈ 3)ದಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ಜುಲೈ 3 ರಿಂದ ಜುಲೈ 14 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಾಗೇ ಅಧಿವೇಶನದ ವೇಳೆ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ಹಾಗೂ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ವಸ್ತುಗಳ ಸಾಗಾಟ ಶೇಖರಣೆ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಮೀರಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಡಲಿದ್ದಾರೆ. ಜುಲೈ 7ರಂದು ಶುಕ್ರವಾರ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತಿದೆ.

suddiyaana