ಎರಡನೇ ದಿನ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಗಲಾಟೆ – ಪ್ರತಿಪಕ್ಷಗಳಿಗೆ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳದ್ದೆ ಚಿಂತೆ..!

ಎರಡನೇ ದಿನ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಗಲಾಟೆ  – ಪ್ರತಿಪಕ್ಷಗಳಿಗೆ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳದ್ದೆ ಚಿಂತೆ..!

ಕರ್ನಾಟಕ ವಿಧಾನಸಭೆ ಅಧಿವೇಶನದ ಎರಡನೇ ದಿನ ಬಿಜೆಪಿ ಸದಸ್ಯರ ಗಲಾಟೆ ತೀವ್ರಗೊಂಡಿದೆ. ಕಲಾಪದಲ್ಲಿ ಬಿಜೆಪಿ ಸದಸ್ಯರು ಜೋರಾಗಿಯೇ ಗದ್ದಲ ಎಬ್ಬಿಸಿದ್ದಾರೆ. ಬಿಜೆಪಿ ನಾಯಕರು ನಿಲುವಳಿ ಸೂಚನೆ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಪ್ರಸ್ತಾಪಿಸಿದರು. ಆದರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್ ಅವಕಾಶ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು.  ಇದಕ್ಕೂ ಮೊದಲು ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲೂ ಭಾರೀ ಗದ್ದಲ-ಗಲಾಟೆ ಶುರುವಾಗಿತ್ತು. ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಲು ನಿಲುವಳಿ ಮಂಡನೆಗೆ ಅವಕಾಶ ನೀಡಬೇಕೆಂದು ವಿಪಕ್ಷ ಬಿಜೆಪಿ ನಾಯಕರು ಸದನದ ಭಾವಿಗಿಳಿದು ಪ್ರತಿಭಟನೆ ಮಾಡಿದರು.

ಇದನ್ನೂ ಓದಿ: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಬರ.. ಶಾಂತಿ, ನೆಮ್ಮದಿಯ ಬೆಳೆ ಇಲ್ಲ – ಸರ್ಕಾರದ ವಿರುದ್ದ ಬಿಜೆಪಿ ಕಿಡಿ

ಬಿಜೆಪಿ ಸದಸ್ಯರು ಸದನದಲ್ಲಿ ಕೋಲಾಹಲ ಎಬ್ಬಿಸಿದರು. ಸರ್ಕಾರದ ಪರವಾಗಿ ಉತ್ತರ ನೀಡಲು ಬಿಜೆಪಿ ಸದಸ್ಯರು ಬಿಡಲೇ ಇಲ್ಲ. ನ್ಯಾಯ ಕೊಡಿ ನ್ಯಾಯ ಕೊಡಿ ಎಂದು ಕೂಗಾಟ ನಡೆಸಿದರು. ನಂತರ 5 ಗ್ಯಾರಂಟಿ ಜಾರಿ ಮಾಡಿ ಎಂದು ಗಲಾಟೆ ಮಾಡಿದರು.

ಸದನದಲ್ಲಿ ಶಾಸಕ ಶಿವಲಿಂಗೇಗೌಡ ಮತ್ತು  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ನಡುವೆ ಮಾತಿನ ಸಮರ ನಡೆಯಿತು. ಬಿಜೆಪಿ ಪರವಾಗಿ ಶಿವಲಿಂಗೇಗೌಡ ಮಾತನಾಡಿದ್ದಕ್ಕೆ ಹೆಚ್. ಡಿ ಕುಮಾರಸ್ವಾಮಿ ಗರಂ ಆದರು. ಕೊಬ್ಬರಿ ಬೆಲೆ ವಿಚಾರವಾಗಿ ಇಬ್ಬರು ಶಾಸಕರು ಒಬ್ಬರಿಗೊಬ್ಬರು ಏಟು ತಿರುಗೇಟು ನೀಡುವಲ್ಲಿ ಮಗ್ನರಾಗಿದ್ದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಯು.ಟಿ ಖಾದರ್ ನಿಮಗೆ ರೈತರ ಮೇಲೆ ಸ್ವಲ್ಪವಾದರೂ ಕಾಳಜಿಯಿದ್ದರೆ ರೈತರ ಬಗ್ಗೆ ಮಾತನಾಡಲು ಅವಕಾಶ ಕೊಡಿ ಎಂದು ಪ್ರತಿಪಕ್ಷಗಳಿಗೆ ಸೂಚನೆ ನೀಡಿದರು.

 

suddiyaana