ವಾಹನ ಸವಾರರಿಗೆ ಗುಡ್‌ ನ್ಯೂಸ್‌ – ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಿದ್ದ ದಂಡದಲ್ಲಿ ಮತ್ತೆ 50 % ಡಿಸ್ಕೌಂಟ್‌!

ವಾಹನ ಸವಾರರಿಗೆ ಗುಡ್‌ ನ್ಯೂಸ್‌ – ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಿದ್ದ ದಂಡದಲ್ಲಿ ಮತ್ತೆ 50 % ಡಿಸ್ಕೌಂಟ್‌!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಚುನಾವಣೆ ಸಂದರ್ಭ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ನರೇಂದ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸದನದಲ್ಲಿ ಗಂಟಲು ಹರಿದುಕೊಳ್ಳುವ ಕಾಂಪಿಟೇಷನ್! – ಕಾಂಗ್ರೆಸ್‌ ವ್ಯಂಗ್ಯ

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ. ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಜನವರಿ – ಫೆಬ್ರವರಿ ತಿಂಗಳಲ್ಲಿ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ನಂತರ ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿತ್ತು. ಆಗಲೂ 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿತ್ತು.

suddiyaana