ರಾಜಕೀಯ ತಿರುವು ಪಡೆದ KSRTC ಚಾಲಕನ ಆತ್ಮಹತ್ಯೆ ಕೇಸ್ – ದ್ವೇಷದ ರಾಜಕಾರಣ ಎಂದು ಹೆಚ್ ಡಿಕೆ ವಾಗ್ದಾಳಿ

ರಾಜಕೀಯ ತಿರುವು ಪಡೆದ KSRTC ಚಾಲಕನ ಆತ್ಮಹತ್ಯೆ ಕೇಸ್ – ದ್ವೇಷದ ರಾಜಕಾರಣ ಎಂದು ಹೆಚ್ ಡಿಕೆ ವಾಗ್ದಾಳಿ

ಮಂಡ್ಯ ಜಿಲ್ಲೆ ನಾಗಮಂಗಲದ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ವಿಚಾರ ರಾಜಕೀಯ ತಿರುವು ಪಡೆದಿದೆ. ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಜಗದೀಶ್ ನಾಗಮಂಗಲ ಬಸ್ ಡಿಪೋ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಪ್ರಕರಣದಲ್ಲಿ ಸಚಿವ ಚಲುವರಾಯಸ್ವಾಮಿ ಹೆಸರು ಕೇಳಿಬಂದಿದ್ದು, ಇದು ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ ಜಗದೀಶ್ ಅವರ ವರ್ಗಾವಣೆಯನ್ನು ತಡೆಹಿಡಿಲಾಗಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್‌? – ಸರ್ವರ್ ಸಮಸ್ಯೆಗೆ ಸರ್ಕಾರದಿಂದ ಹೊಸ ಪ್ಲಾನ್‌!

ಮಂಡ್ಯ ಜಿಲ್ಲೆ ನಾಗಮಂಗಲದ KSRTC ಬಸ್ ಡಿಪೋನಲ್ಲಿ ಘಟನೆ ನಡೆದಿದ್ದು, ಹೆಚ್.ಆರ್.ಜಗದೀಶ್, ಆತ್ಮಹತ್ಯೆಗೆ ಯತ್ನಿಸಿದ್ದರು. ಅಧಿಕಾರಿಗಳು ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದರು ಎಂದು ತಿಳಿದುಬಂದಿದೆ. ಅಧಿಕಾರಿಗಳು ವರ್ಗಾವಣೆ ಆದೇಶ ನೀಡಲು ಮುಂದಾದಾಗ ವರ್ಗಾವಣೆ ಆದೇಶ ತೆಗೆದುಕೊಳ್ಳದೆ ಕ್ರಿಮಿನಾಶಕ ತಂದು ಡಿಪೋದಲ್ಲೇ ಸೇವನೆ ಮಾಡಿದ್ದರು. ಇನ್ನು ಆತ್ಮಹತ್ಯೆಗೆ ಯತ್ನಿಸುವ ಮುನ್ನ ಕಂಡಕ್ಟರ್ ಜಗದೀಶ್ ಡೆತ್ ನೋಟ್ ಬರೆದಿರುವುದು ಬೆಳಕಿಗೆ ಬಂದಿದೆ. ‘ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನ ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಎಂದ್ರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ, ಅವಮಾನವನ್ನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾನೆ.’

ಆತ್ಮಹತ್ಯೆಗೆ ಯತ್ನಿಸಿದ ಚಾಲಕನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಎಚ್. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಗದೀಶ್ ಸದ್ಯ ವೆಂಟಿಲೇಟರ್‌ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಜಗದೀಶ್ ಪತ್ನಿ ಪಂಚಾಯತಿ ಸದಸ್ಯರು. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ಮಹದೇವ ಎಂಬ ರೌಡಿ ಜಗದೀಶ್​ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಏರಿದ್ದಾನೆ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ನಾಗಮಂಗಲದಲ್ಲಿ (Nagamangala) ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ (Transfer) ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ.

suddiyaana