ಮೋದಿ ಉಪನಾಮ ವಿವಾದ – ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ ಖಾಯಂ

ಮೋದಿ ಉಪನಾಮ ವಿವಾದ – ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ ಖಾಯಂ

2019ರಲ್ಲಿ ಮೋದಿ ಸರ್‌ನೇಮ್ ಕುರಿತಾದ ವಿವಾದಾತ್ಮಕ ಹೇಳಿಕೆ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ತಮಗೆ ವಿಧಿಸಿರುವ ಶಿಕ್ಷೆಯನ್ನು ತಡೆ ಹಿಡಿಯಬೇಕು ಎಂದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಇದರಿಂದ ಲೋಕಸಭಾ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆ ಮುಂದುವರಿಯಲಿದೆ. ಈಗ ಈ ವಿಚಾರವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.

ಇದನ್ನೂ ಓದಿ: 2 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಇಂದು ರಾಹುಲ್‌ ಗಾಂಧಿ ಮೇಲ್ಮನವಿ –  ಸೂರತ್‌ ಗೆ ತೆರಳಲಿದೆ ರಾಗಾ ಟೀಮ್

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಯ ವಿರುದ್ಧ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಮಾರ್ಚ್ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ.

ಈ ನಿರ್ಧಾರದ ಹಿನ್ನೆಲೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕಪೀಠ ಈ ಕುರಿತು ತೀರ್ಪು ನೀಡಿದೆ. ಮಾರ್ಚ್ 23 ರಂದು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ “ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ?”ಎಂದು ಹೇಳಿದ್ದರು.

suddiyaana