ಬಜೆಟ್ನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು – ಕರಾವಳಿ ಜಿಲ್ಲೆಗಳಲ್ಲಿ ಕಡಲತೀರ ಪ್ರವಾಸೋದ್ಯಮಕ್ಕೆ ಶಕ್ತಿ
ಬೆಂಗಳೂರು: ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ರಾಜ್ಯದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಒತ್ತು ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ನಡೆಸಲು ಚಿಂತನೆ ನಡೆಸಲಾಗಿದೆ. ಮಂಗಳೂರಿನ ಸಸಿಹುತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ಗೆ ಹೊಸ ಟಚ್ ನೀಡಲು ಬಜೆಟ್ ನಲ್ಲಿ ತೀರ್ಮಾನ – ಯೋಜನೆಗೆ 100 ಕೋಟಿ ರೂ. ಮೀಸಲು
ಇನ್ನು ತುರ್ತು ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆಗಾಗಿ ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಈ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ ಅಥವಾ ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಲಾಗಿದೆ.
ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ. ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಆಧುನಿಕ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿ ನಿರ್ಮಾಣಕ್ಕೆ ಕ್ರಮ.
ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಆಧುನಿಕ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿರುವ 16 ವಸ್ತು ಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮ. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಬಜೆಟ್ನಲ್ಲಿ ಘೋಷಿಸಿದ್ದಾರೆ.
ಒಂದು ರಾಜ್ಯ ಹಲವು ಜಗತ್ತು ಎಂಬ ಘೋಷಾವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ, ಈ ಹಿನ್ನೆಲೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್ ಪ್ಲಾನ್ ತಯಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮಯತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ.ಗಳನ್ನು ಸರ್ಕಾರದಿಂದ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.