ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ಗೆ ಲಘು ಹೃದಯಾಘಾತ – ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ಲಿಫ್ಟ್
ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಲಂಕಾದ ರಾಜಧಾನಿ ಕೊಲಂಬೋನಿಂದ ಏರ್ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.
ಕಸ್ತೂರಿ ರಂಗನ್ ಅವರು ಶ್ರೀಲಂಕಾದಲ್ಲಿ ಪ್ರಯಾಣಿಸುವ ವೇಳೆ ಲಘು ಹೃದಯಾಘಾತ ಸಂಭವಿಸಿದೆ. ಕೊಲಂಬೋದಿಂದ ಬೆಂಗಳೂರಿಗೆ ಏರ್ಲಿಫ್ಟ್ ಮಾಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಖ್ಯಾತ ಹೃದ್ರೋಗ ತಜ್ಞ ಡಾ ದೇವಿ ಶೆಟ್ಟಿ ಕಸ್ತೂರಿ ರಂಗನ್ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಬೆಂಗಳೂರಿಗೆ ಬಂದಕೂಡಲೇ ಅವರನ್ನು ಜೀರೋ ಟ್ರಾಫಿಕ್ ಮೂಲಕ ರವಾನಿಸಿ ನಾರಾಯಣ ಹೃದಯಾಲಯದಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: 86 ವರ್ಷದ ಮಾಜಿ ಪ್ರಧಾನಿಗೆ 33 ವರ್ಷದ ಸುಂದರಿ ಜೊತೆ ಪ್ರೀತಿ – ಸಾಯುವ ಮೊದಲು ಪ್ರೇಯಸಿಗೆ ಬರೆದರು 900 ಕೋಟಿ ಮೌಲ್ಯದ ಆಸ್ತಿ..!
ವಿಮಾನ ನಿಲ್ದಾಣದಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲು ರವಾನಿಸಲಾಗಿದೆ. ಇನ್ನು ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಶೀಘ್ರವಾಗಿ ಅವರು ಗುಣಮುಖರಾಗಲಿದೆ’ ಎಂದು ಹಾರೈಸಿದ್ದಾರೆ.
ಕಸ್ತೂರಿ ರಂಗನ್ ಅವರು 1 ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 83 ವರ್ಷದ ಕಸ್ತೂರಿ ರಂಗನ್ ಅವರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ.