ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಮುಂದಾದ ಬಿಬಿಎಂಪಿ‌ – ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಅಧಿಕಾರಿ ನೇಮಕ

ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಮುಂದಾದ ಬಿಬಿಎಂಪಿ‌ – ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಅಧಿಕಾರಿ ನೇಮಕ

ಬೆಂಗಳೂರು: ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮತ್ತೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದಿರಾ ಕ್ಯಾಂಟೀನ್​ಗಳಿಗೆ ಜಾಸ್ತಿ ಕಾಳಜಿ ತೋರಿಸುತ್ತಿದ್ದ ಸರ್ಕಾರ ಒಂದೊಂದಾಗಿಯೇ ಮೆನು ಕೂಡಾ ಬದಲಾವಣೆ ಮಾಡುತ್ತಿದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ.

ಇದನ್ನೂ ಓದಿ: ಜೂನ್‌ ತಿಂಗಳಲ್ಲೂತಿಮ್ಮಪ್ಪನ ಹುಂಡಿಯಲ್ಲಿ ಬಂಪರ್ ಕಲೆಕ್ಷನ್‌! – ಲಕ್ಷ, ಕೋಟಿ, ಸಾವಿರ ಕೋಟಿ ಗಡಿ​ ದಾಟಿದ್ದು ಯಾವಾಗ?

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯನವರ ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್ ಗಳಿಗೆ ಹೆಚ್ಚು ಕಾಳಜಿ ತೋರಿಸಲಾಗುತ್ತಿದೆ. ಅವ್ಯವಸ್ಥೆಗಳನ್ನು ಸರಿಪಡಿಸಲಾಗುತ್ತಿದೆ. ಅಧಿಕಾರಿಗಳು ಇಂದಿರಾ ಕಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಅವರು ಕೂಡ ಇಂದಿರಾ ಕ್ಯಾಂಟೀನ್‌ ಗೆ ಭೇಟಿ ನೀಡಿದ್ದರು. ಈ ವೇಳೆ ಇಂದಿರಾ ಕ್ಯಾಂಟೀನ್​ನಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಈಗ ಪ್ರತಿ ಇಂದಿರಾ ಕ್ಯಾಂಟೀನ್​ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ, ಕ್ಯಾಂಟೀನ್ ಸ್ವಚ್ಚತೆ ಬಗ್ಗೆ ನಿಗಾ ಇಡಲು ತಮ್ಮದೇ ಅಧಿಕಾರಿ ನೇಮಿಸಲು ಬಿಬಿಎಂಪಿ ಪಾಲಿಕೆ ಮುಂದಾಗಿದೆ. ಇದರ ಜೊತೆಗೆ ಹೊಸ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಲಾಗಿದೆ.

ಇಂದಿರಾ ಕ್ಯಾಂಟೀನ್​ಗೆ ಸಹಾಯವಾಣಿ 1533 ಸಹಾಯವಾಣಿ ಮೂಲಕ ಜನರಿಗೆ ಸೇವೆ ನೀಡಲು ಹೊಸ ಸಹಾಯವಾಣಿ ರೂಪಿಸಲಾಗಿದೆ. ಎಲ್ಲಾ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಲಾಗಿದೆ. ಇದರ ಜೊತೆಗೆ ರಸ್ತೆ ಬದಿ ಕಸ ಸುರಿಯುವುದನ್ನು ತಡೆಯಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ. ಕಸ ಸುರಿಯುವವರ ಮೇಲೆ ನಿಗಾ ವಹಿಸಲು ಪಾಲಿಕೆ ಮಾರ್ಷಲ್ಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ತಂಡ ರಚನೆ ಮಾಡಿದೆ. ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ಈ ತಂಡ ನಿಗಾ ವಹಿಸಲಿದೆ. ತ್ಯಾಜ್ಯ ವಿಲೇವಾರಿ ಮಾಡೋ ಬಿಬಿಎಂಪಿ ಕಾಂಪ್ಯಾಕ್ಟರ್​ಗಳ ಮೇಲೂ ನಿಗಾ ಇಡಲಾಗುತ್ತೆ. ಪ್ರಾಯೋಗಿಕವಾಗಿ ಒಂದು ವಲಯದಲ್ಲಿ ಯೋಜನೆ ಆರಂಭ ಮಾಡಲು ಪಾಲಿಕೆ ಮುಂದಾಗಿದೆ.

suddiyaana