ಉತ್ತರಭಾರತದಲ್ಲಿ ಮುಂದುವರಿದ ವರುಣಾರ್ಭಣ – ಸಾವಿನ ಸಂಖ್ಯೆ 145ಕ್ಕೆ ಏರಿಕೆ
ನವದೆಹಲಿ: ಉತ್ತರ ಭಾರತದಲ್ಲಿ ವರುಣನ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದೆ. ಮಳೆ ಪ್ರಾರಂಭವಾದಾಗಿನಿಂದ ಇದುವರೆಗೆ ಬರೋಬ್ಬರಿ 145 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ 91 ಮಂದಿ ಮೃತಪಟ್ಟಿದ್ದರೆ, ಉತ್ತರ ಪ್ರದೇಶದಲ್ಲಿ 14, ಹರಿಯಾಣದಲ್ಲಿ 16, ಪಂಜಾಬ್‌ನಲ್ಲಿ 11 ಮತ್ತು ಉತ್ತರಾಖಂಡದಲ್ಲಿ 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾಗೆ ಮುತ್ತುರಾಜನ ಉಡುಗೊರೆ – ಮರಳಿ ಪಡೆಯಲು ಥಾಯ್ಲೆಂಡ್ ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ 75.75 ಕೋಟಿ ರೂಪಾಯಿ..!
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಗುಡ್ಡಗಾಡು ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಮತ್ತೆ ಮುಂದುವರಿದಿದೆ. ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಉತ್ತರಾಖಂಡ್ ಮತ್ತು ಹರಿಯಾಣದಲ್ಲಿ ಇಂದೂ ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದೆಹಲಿಯ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದ್ದು, ಅಷ್ಟು ಮಾತ್ರವಲ್ಲದೆ ಜುಲೈ 14 ರವರೆಗೆ ಕೆಂಪು ಕೋಟೆಯನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ.