ಐತಿಹಾಸಿಕ ಚಂದ್ರಯಾನ 3 ಉಡಾವಣೆ ಯಶಸ್ವಿ – ಇಸ್ರೋ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಐತಿಹಾಸಿಕ ಚಂದ್ರಯಾನ 3 ಉಡಾವಣೆ ಯಶಸ್ವಿ – ಇಸ್ರೋ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಇಡೀ ಭಾರತವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಬಾಹುಬಲಿ ರಾಕೆಟ್‌ ಎಲ್‌ವಿಎಂ3- ಎಂ4 ನಭಕ್ಕೆ ಹಾರಿದೆ. ಆ ಮೂಲಕ ಇಸ್ರೋಗೆ  ಮತ್ತೊಂದು ಗರಿ ಸಿಕ್ಕಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿತು. ಮಿಷನ್ ಯಶಸ್ವಿಯಾದರೆ ಚಂದ್ರನ ಮೇಲೆ ಇಳಿದ ನಾಲ್ಕನೇ ರಾಷ್ಟ್ರವಾಗಲಿದೆ ಭಾರತ. ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್‌ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಅನ್ನು ಕೂರಿಸಲಾಗಿದೆ. ಇದನ್ನು ಲಾಂಚ್ ವೆಹಿಕಲ್ ಮಾರ್ಕ್ 3 (LM-3) ಎಂದು ಮರುನಾಮಕರಣ ಮಾಡಲಾಗಿದ್ದು, ಈ GSLV 43.5 ಮೀಟರ್ ಎತ್ತರವಿದೆ.

ಇದನ್ನೂ ಓದಿ: ಶತಕವನ್ನು ತಂದೆ ತಾಯಿಗೆ ಅರ್ಪಿಸಿದ ದಾಖಲೆಯ ಸರದಾರ – ಯಶಸ್ವಿ ಜೈಸ್ವಾಲ್ ಮಾತಿಗೆ ಅಭಿಮಾನಿಗಳ ಜೈಹೋ..

ಈ ರಾಕೆಟ್‌ ಚಂದ್ರನ ಅಂಗಳಕ್ಕೆ ತಲುಪಲು ಸುಮಾರು 40 ದಿನಗಳಾಗುತ್ತದೆ. ಇದೇ ಆಗಸ್ಟ್ 23 ರಂದು ಬಾಹ್ಯಾಕಾಶ ನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.

ಚಂದ್ರಯಾನ-3, ಮೂರು ಪ್ರಮುಖ ಘಟಕಗಳನ್ನು ಹೊಂದಿರುತ್ತದೆ. ಪ್ರೊಪಲ್ಷನ್ ಮಾಡ್ಯೂಲ್‌, ಲ್ಯಾಂಡರ್ ಮತ್ತು ರೋವರ್. ಇದು ಚಂದ್ರನ ವಾತಾವರಣದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಚಂದ್ರಯಾನ-2 ರ ಆರ್ಬಿಟರ್ ಅನ್ನು ಬಳಸುತ್ತದೆ.

ಮೊದಲ ಬಾರಿಗೆ ಭಾರತದ ಚಂದ್ರನೌಕೆ ‘ವಿಕ್ರಮ್’ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಅಲ್ಲಿ ನೀರಿನ ಅಣುಗಳು ಕಂಡುಬಂದಿವೆ. 2008 ರಲ್ಲಿ ಭಾರತದ ಮೊದಲ ಚಂದ್ರಯಾನದ ಸಮಯದಲ್ಲಿ ಕಂಡುಬಂದ ಈ ಸಂಶೋಧನೆಯು ಜಗತ್ತನ್ನು ಬೆಚ್ಚಿ ಬೀಳಿಸಿತ್ತು.

ಚಂದ್ರಯಾನ-3 ಯಶಸ್ವಿ ಉಡಾವಣೆ ಹಿನ್ನೆಲೆ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದಿದ್ದಾರೆ.

suddiyaana