ಎನ್ ಡಿಎ ಸಭೆಗೂ ಜೆಡಿಎಸ್ ಗೆ ಆಹ್ವಾನವಿಲ್ಲ – ಕಾದು ನೋಡಲು ಮುಂದಾದ ಹೆಚ್.ಡಿ ಕುಮಾರಸ್ವಾಮಿ

ಎನ್ ಡಿಎ ಸಭೆಗೂ ಜೆಡಿಎಸ್ ಗೆ ಆಹ್ವಾನವಿಲ್ಲ – ಕಾದು ನೋಡಲು ಮುಂದಾದ ಹೆಚ್.ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಗೆ ಇನ್ನೂ ತಿಂಗಳುಗಳು ಬಾಕಿ ಇರುವಾಗಲೇ ಪಕ್ಷಗಳು ರಣತಂತ್ರ ಹೆಣೆಯುತ್ತಿವೆ. ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸ್ತಿವೆ. ಇದಕ್ಕೆ ಕೌಂಟರ್ ಕೊಡಲು ಬಿಜೆಪಿ ಸಹ ಭರ್ಜರಿ ತಯಾರಿ ಮಾಡಿದ್ದು ಮಂಗಳವಾರ ಸಂಜೆ ದೆಹಲಿಯಲ್ಲಿ ಎನ್‌ಡಿಎ ಒಕ್ಕೂಟದ ಸಭೆ (NDA Meeting)ನಡೆಯಲಿದೆ.

ಇದನ್ನೂ ಓದಿ :ವರ್ಗಾವಣೆ ದಂಧೆಯಲ್ಲಿ 500 ಕೋಟಿ ರೂಪಾಯಿ ವ್ಯವಹಾರ..! – ಸರ್ಕಾರದ ವಿರುದ್ಧ ಹೆಚ್‌ಡಿಕೆ ಗಂಭೀರ ಆರೋಪ

ಬೆಂಗಳೂರಿನಲ್ಲಿ 26 ಪಕ್ಷಗಳ ಶಕ್ತಿ ಪ್ರದರ್ಶನವಾದ್ರೆ, ಅತ್ತ ದೆಹಲಿಯಲ್ಲಿ 38 ಪಕ್ಷಗಳ ಶಕ್ತಿ ಪ್ರದರ್ಶನವಾಗೋ ಸಾಧ್ಯತೆ ಇದೆ. ಇನ್ನು ಜೆಡಿಎಸ್-ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎನ್ನುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಎನ್‌ಡಿಎ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಎನ್​ಡಿಎ ಮೈತ್ರಿಕೂಟ ಸಭೆಗೆ ಜೆಡಿಎಸ್​ಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಖುದ್ದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಸಭೆಗೆ ನನಗೆ ಆಹ್ವಾನ ಬಂದಿಲ್ಲ ಎಂದಿದ್ದರು. ಇದರೊಂದಿಗೆ ಇತ್ತ ಮಹಾಘಟಬಂಧನ್​​ ಸಭೆಗೂ ಆಹ್ವಾನವಿಲ್ಲ, ಅತ್ತ ಎನ್​ಡಿಎ ಮೈತ್ರಿಕೂಟದ ಸಭೆಗೂ ಆಹ್ವಾನ ಬಂದಿಲ್ಲ. ಈ ಹಿನ್ನೆಯಲ್ಲಿ ಕುಮಾರಸ್ವಾಮಿ ನಡೆ ಯಾವ ಕಡೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿರುವ ದಳಪತಿಗಳು ಇಂದಿನ ಎನ್​ಡಿಎ ಮೈತ್ರಿಕೂಟ ಸಭೆಗೆ ಆಹ್ವಾನ ಬರದಿರುವುದರಿಂದ ಕುಮಾರಸ್ವಾಮಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಸಭೆಯಿಂದ ಅಂತರ ಕಾಯ್ದುಕೊಂಡಿರುವ ಹೆಚ್.​ಡಿ ದೇವೇಗೌಡ, ಹೆಚ್.​ಡಿ ಕುಮಾರಸ್ವಾಮಿ, ಇಂದಿನ ಸಭೆಯ ನಿರ್ಧಾರ ನೊಡಿಕೊಂಡು ಮೈತ್ರಿ ಬಗ್ಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ನಾವು ಬಿಜೆಪಿ ಜೊತೆ ಹೋದರೆ ಕೆಲ ಸಮುದಾಯದ ವಿರೋಧವನ್ನ ಕಟ್ಟಿಕೊಳ್ಳಬೇಕು. ಇದರಿಂದ ಪಕ್ಷಕ್ಕೆ ಹೊಡೆತ ಆಗಬಹುದು. ಹೀಗಾಗಿ ಎಚ್ಚರಿಕೆಯಿಂದ ಹೆಚ್ಚೆ ಇಡಬೇಕು ಎಂದು ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕೋ ಬೇಡ್ವಾ ಎನ್ನುವ ಬಗ್ಗೆ ಚಿಂತನೆ ನಡೆಸಿದ್ದಾರೆ.

 

suddiyaana