ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ – ಕಾಂಗ್ರೆಸ್ ಹಿರಿಯ ನಾಯಕನಿಗೆ ಗಣ್ಯರ ಸಂತಾಪ

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ – ಕಾಂಗ್ರೆಸ್ ಹಿರಿಯ ನಾಯಕನಿಗೆ ಗಣ್ಯರ ಸಂತಾಪ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ವಿಧಿವಶರಾಗಿದ್ದಾರೆ. 79 ವರ್ಷದ ಉಮ್ಮನ್ ಚಾಂಡಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮಂಗಳವಾರ ಬೆಳಗ್ಗಿನ ಜಾವ 4.25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜನ್, ಉಮ್ಮನ್ ಚಾಂಡಿಯವರು ನಿಧನರಾಗಿದ್ದಾರೆ ಎಂಬ ವಿಚಾರವನ್ನು ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಮಂತ್ರ – 7 ಕ್ಷೇತ್ರಗಳಿಗೆ ಬೇಡಿಕೆ ಇಟ್ಟ ಹೆಚ್ ಡಿಕೆ

ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದರು. ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್‌ಬಿ ಪದವಿ ಪೂರೈಸಿದ್ದರು. ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾದ್ದರು. ಉಮ್ಮನ್ ಚಾಂಡಿ 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಒಮನ್ ಚಾಂಡಿ 1970 ರಲ್ಲಿ ಪುತ್ತುಪಲ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಒಮ್ಮನ್ ಚಾಂಡಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

suddiyaana