ಸಿನಿಮಾ ಆಗಲಿದೆ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ದುರಂತ ಕಥೆ – ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಸಿನಿಮಾ ಆಗಲಿದೆ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ದುರಂತ ಕಥೆ – ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಧರ್ಮಸ್ಥಳದ ಸೌಜನ್ಯ ಯಾರಿಗೆ ಗೊತ್ತಿಲ್ಲ ಹೇಳಿ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಪ್ರಕರಣವೆಂದರೆ ಅದು ಸೌಜನ್ಯ ಮೇಲಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ವಿದ್ಯಾರ್ಥಿನಿ ಸೌಜನ್ಯಳ ದುರಂತ ಸಾವು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಅದೆಷ್ಟೋ ಪ್ರತಿಭಟನೆಗಳು ನಡೆದಿದ್ದವು. ಕೊನೆಗೂ ದುರಂತ ಅಂತ್ಯ ಕಂಡಿರುವ ಮುಗ್ಧ ಹುಡುಗಿ ಸೌಜನ್ಯ ಸಾವಿಗೆ ನ್ಯಾಯ ಸಿಗದೆ ಇರುವುದು ಕೂಡಾ ವಿಪರ್ಯಾಸವೇ. ಇದೀಗ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ದುರಂತದ ಕಥೆ ಸಿನಿಮಾವಾಗಿ ಬರಲಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ಆರೋಪಿ ಸಂತೋಷ್‌ ರಾವ್‌ ಗೆ ಜಾಮೀನು

ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿರುವುದು. ಮಿಸ್ಸಿಂಗ್ ಕೇಸ್ ದಾಖಲಾಗಿರುವುದು, ಮರುದಿನ ಶವ ಪತ್ತೆ ಆಗಿರುವುದು ಹೀಗೆ ನೈಜ ಘಟನೆ ಇಟ್ಟುಕೊಂಡು ಸಿನಿಮಾ ಮಾಡಲು ನಿರ್ಧರಿಸಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ.

suddiyaana