ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ.. ಥೇಟ್ ನಾಗವಲ್ಲಿಯ ತರ! – ಮೈತ್ರಿ ವಿಚಾರವಾಗಿ ಕಾಲೆಳೆದ ಕಾಂಗ್ರೆಸ್‌

ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ.. ಥೇಟ್ ನಾಗವಲ್ಲಿಯ ತರ! – ಮೈತ್ರಿ ವಿಚಾರವಾಗಿ ಕಾಲೆಳೆದ ಕಾಂಗ್ರೆಸ್‌

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಈ ನಡುವೆಯೇ ಜೆಡಿಎಸ್‌ – ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಸುದ್ದಿ ಹಲವು ದಿನಗಳಿಂದ ಕೇಳಿಬರುತ್ತಿದೆ. ಕಳೆದ ಬಾರಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಈ ಬಾರಿ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲಿದೆ ಎನ್ನಲಾಗುತ್ತಿದೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಟ್ವೀಟ್‌ ಮಾಡಿ ಜೆಡಿಎಸ್‌ ಅನ್ನು ‘ನಾಗವಲ್ಲಿ’ಗೆ ಹೋಲಿಸಿದೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 81ನೇ ಹುಟ್ಟುಹಬ್ಬ – ಕನ್ನಡಿಗನ ರಾಜಕೀಯ ಹಾದಿಯೇ ರೋಚಕ

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ  ರಾಜ್ಯ ಕಾಂಗ್ರೆಸ್‌ ‘ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!’ ಎಂದು ವ್ಯಂಗ್ಯವಾಡಿದೆ.

ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು “ಕುರುಡನ ಹೆಗಲ ಮೇಲೆ ಕುಂಟನ ಸವಾರಿ”ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಬಿಜೆಪಿಗೆ ದಲಿತರ ರಾಜಕೀಯ ಹಾಗೂ ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು ಬಿಜೆಪಿ. ಹಣವನ್ನು ದುರುಪಯೋಗ ಮಾಡಿತ್ತು ಬಿಜೆಪಿ. ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು ಬಿಜೆಪಿ. ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ. ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ?  ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

suddiyaana