ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್ ಹೇಳಿಕೆ ವಿರುದ್ಧ ಭುಗಿಲೆದ್ದ ಕಿಚ್ಚು – ವಿಧಾನಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ

ಸಿದ್ದರಾಮಯ್ಯ ವಿರುದ್ಧ ಬಿ.ಕೆ ಹರಿಪ್ರಸಾದ್ ಹೇಳಿಕೆ ವಿರುದ್ಧ ಭುಗಿಲೆದ್ದ ಕಿಚ್ಚು – ವಿಧಾನಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ರಾಜಕೀಯದಲ್ಲೀಗ ಸಿಎಂ ಕುರ್ಚಿ ವಿಚಾರ ಮತ್ತೊಮ್ಮೆ ಸಂಚಲನ ಸೃಷ್ಟಿಸಿದೆ. ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್​ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿದೆ. ಕಾಂಗ್ರೆಸ್​ನಲ್ಲೇ ಆಕ್ರೋಶ ಭುಗಿಲೆದ್ದಿದ್ದು, ಬಿ.ಕೆ ಹರಿಪ್ರಸಾದ್ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಮತೆ ಒತ್ತಾಯಿಸಿದ್ದಾರೆ.

ಬಿ.ಕೆ ಹರಿಪ್ರಸಾದ್ ಅವರು ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದರು. ಇದೇ ವಿಚಾರವಾಗಿ ಸಿದ್ದರಾಮಯ್ಯನವರ ಅಭಿಮಾನಿಗಳು ಬಿ.ಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ :ಸರ್ವರ್‌ ಸಮಸ್ಯೆ ಮಧ್ಯೆಯೂ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ –  2ನೇ ದಿನ ಬರೋಬ್ಬರಿ 7.7 ಲಕ್ಷ ನೋಂದಣಿ

ಬಿ.ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು. ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.

suddiyaana