ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ ಸೇರಿ ಕೆಲ ವಾಹನ ಸಂಚಾರಕ್ಕೆ ಆ.1ರಿಂದ ನಿರ್ಬಂಧ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ದಿನೇ ದಿನೇ ಅಪಘಾತಗಳ ಹೆಚ್ಚಾಗುತ್ತಿದೆ. ಈಗಾಗಲೇ ನೂರಾರು ಮಂದಿ ಈ ಹೆದ್ದಾರಿಯಲ್ಲಿ ಜೀವಕಳೆದುಕೊಂಡಿದ್ದಾರೆ. ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಅಪಘಾತಗಳನ್ನು ತಡೆಯಲು ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ ಮಾಡಲು ಮುಂದಾಗಿದ್ದು, ಆಗಸ್ಟ್ 1 ರಿಂದ ಈ ನಿಯಮ ಜಾರಿಗೆ ಬರಿಲಿದೆ.
ಇದನ್ನೂ ಓದಿ: ಜಂಬೂಸವಾರಿಗೆ ಹೊಸ ಆನೆಗಳ ಹುಡುಕಾಟ – ಆಗಸ್ಟ್ 23ರಿಂದ ಗಜಪಯಣ ಆರಂಭ
ರಾಜ್ಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿರ್ಬಂಧ ಹೇರಲು ಮುಂದಾಗಿದೆ. ಈ ಸಂಬಂಧ ಜುಲೈ 12ರಂದು ರಾಷ್ಟ್ರೀಯ ಹೆದ್ದಾರಿ ನಿಯಂತ್ರಣ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಲ್ಲದೇ ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ವೇಗಮಿತಿ ನಿಗದಿ ಮಾಡಲಾಗಿದ್ದು ಗಂಟೆಗೆ 80 ರಿಂದ 100 ಕಿ.ಮೀಗೆ ಮಿತಿ ಹೇರಿರುವ ಕುರಿತು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.
ಯಾವೆಲ್ಲಾ ವಾಹನಗಳಿಗೆ ನಿರ್ಬಂಧ?
- ಮೋಟರ್ ಸೈಕಲ್ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ)
- ತ್ರಿಚಕ್ರವಾಹನ (ಆಟೋ ರಿಕ್ಷಾ, ಇ-ಕಾರ್ಟ್ ವಾಹನಗಳು)
- ಮೋಟಾರು ರಹಿತ ವಾಹನಗಳು, ಸೈಕಲ್ಗಳು
- ಟ್ರಾಕ್ಟರ್ಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ಟ್ರೇಲರ್ ವಾಹನಗಳು