ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಎರಡು ಸಮುದಾಯಗಳ ಮಧ್ಯೆ ಮತ್ತೆ ಗುಂಡಿನ ಕಾಳಗ

ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಎರಡು ಸಮುದಾಯಗಳ ಮಧ್ಯೆ ಮತ್ತೆ ಗುಂಡಿನ ಕಾಳಗ

ಜನಾಂಗೀಯ ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಹಿಂಸಾಚಾರ ನಿಲ್ಲುವಂತೆ ಕಾಣುತ್ತಿಲ್ಲ. ದಿನೇ ದಿನೇ ಹೆಚ್ಚುತ್ತಿದೆ. ಸಂಘರ್ಷಕ್ಕೆ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಎರಡು ಸಮುದಾಯಗಳ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ – ಮಗುವಿನ ತಂದೆಗೂ 1 ತಿಂಗಳು ಲೀವ್‌!

ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಬುಧವಾರ ರಾತ್ರಿಯಿಂದ ಗುಂಡಿನ ಸದ್ದು ಕೇಳಿ ಬರುತ್ತಿದೆ. ನಿರಂತರ ಗುಂಡಿನ ಕಾಳಗದಿಂದ ಗ್ರಾಮಸ್ಥರೆಲ್ಲ ಭಯಗೊಂಡಿದ್ದಾರೆ. ಹಿಂಸಾಚಾರದ ಸಂದರ್ಭದಲ್ಲಿ ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಗುಂಡಿನ ಚಕಮಕಿ ನಡೆದ ಸ್ಥಳದ ಸಮೀಪದಲ್ಲಿ ವಾಸಿಸುತ್ತಿದ್ದ ಅನೇಕ ಗ್ರಾಮಸ್ಥರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ಚಕಮಕಿಗೂ ಮುನ್ನ ಬುಧವಾರ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್‌ಗಳಿಗೆ ಗುಂಪೊಂದು ಬೆಂಕಿ ಹಚ್ಚಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುಮಾರು 3 ತಿಂಗಳ ಹಿಂದೆ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಅಂದಿನಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಈ ಗಲಭೆ ಸದ್ಯಕ್ಕೆ ತಣ್ಣಗಾಗುವಂತೆ ಕಾಣುತ್ತಿಲ್ಲ.

suddiyaana